ಕರ್ನಾಟಕ ಮಾಧ್ಯಮ ಅಕಾಡೆಮಿ ಅಧ್ಯಕ್ಷರಾಗಿ ಹಿರಿಯ ಪತ್ರಕರ್ತೆ ಆಯೇಷಾ ಖಾನಂ ನೇಮಕ

ಬೆಂಗಳೂರು: ಕರ್ನಾಟಕ ಮಾಧ್ಯಮ ಅಕಾಡೆಮಿಯ ಅಧ್ಯಕ್ಷರಾಗಿ ಹಿರಿಯ ಪತ್ರಕರ್ತೆ ಆಯೇಷಾ ಖಾನಂ ಅವರನ್ನು ನೇಮಕ ಮಾಡಿ ರಾಜ್ಯ ಸರ್ಕಾರ ಬುಧವಾರ ಆದೇಶ ಹೊರಡಿಸಿದೆ. ಈ ಮೂಲಕ ಇದೇ ಮೊದಲ ಬಾರಿಗೆ ನಿರಂತರವಾಗಿ ವೃತ್ತಿಪರತೆ ಕಾಪಾಡಿಕೊಂಡು ಬಂದಿರುವ ಅಲ್ಪಸಂಖ್ಯಾತ ಸಮುದಾಯದ ಹಿರಿಯ ಮಹಿಳಾ ಪ್ರತಿನಿಧಿಯೊಬ್ಬರು ಮಾಧ್ಯಮ ಅಕಾಡೆಮಿ ಅಧ್ಯಕ್ಷ ಸ್ಥಾನವನ್ನು ಅಲಂಕರಿಸುತ್ತಿದ್ದಾರೆ.

ಹಿರಿಯ ಪತ್ರಕರ್ತೆ ಆಯೇಷಾ ಖಾನಂ ಅವರಿಗೆ ಮಾಧ್ಯಮಗಳಲ್ಲಿ 20 ವರ್ಷಕ್ಕಿಂತ ಹೆಚ್ಚು ವರದಿಗಾರರಾಗಿ ಕಾರ್ಯನಿರ್ವಹಿಸಿದ್ದಾರೆ. ದಿ ಏಷಿಯನ್​ ಏಜ್​, ಸ್ಟಾರ್​ ನ್ಯೂಸ್​, ಆಜ್​ ತಕ್​, ದೂರದರ್ಶನದಲ್ಲಿ ಹೀಗೆ ವಿವಿಧ ಮಾಧ್ಯಮಗಳಲ್ಲಿ ವರದಿಗಾರರಾಗಿ ಕೆಲಸ ಮಾಡಿದ್ದಾರೆ. ದೂರದರ್ಶನ ಹಾಗೂ ಚಂದನದಲ್ಲಿ 11 ವರ್ಷಗಳ ಕಾಲ ವರದಿಗಾರರಾಗಿ ಸೇವೆ ಸಲ್ಲಿಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!