ಉಡುಪಿ: ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಬಂಧನ ಖಂಡಿಸಿ ಪ್ರತಿಭಟನೆ
ಉಡುಪಿ: ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರನ್ನು ಬಂಧಿಸಿ ಪ್ರತಿಭಟನೆಯ ಸಾಂವಿಧಾನಿಕ ಹಕ್ಕನ್ನು ಮೊಟಕುಗೊಳಿಸಿರುವ ಕಾಂಗ್ರೆಸ್ ನೇತೃತ್ವದ ರಾಜ್ಯ ಸರಕಾರದ ಕ್ರಮವನ್ನು ಖಂಡಿಸಿ ಉಡುಪಿ ಜಿಲ್ಲಾ ಬಿಜೆಪಿ ನೇತೃತ್ವದಲ್ಲಿ ಜಿಲ್ಲಾ ಯುವ ಮೋರ್ಚಾ ಸಹಯೋಗದೊಂದಿಗೆ ಬಿಜೆಪಿ ಜಿಲ್ಲಾ ಕಚೇರಿಯ ಬಳಿ ಬೃಹತ್ ಪ್ರತಿಭಟನೆ ನಡೆಯಿತು.
ಬಿಜೆಪಿ ಮಂಗಳೂರು ವಿಭಾಗ ಪ್ರಬಾರಿ ಕೆ.ಉದಯ ಕುಮಾರ್ ಶೆಟ್ಟಿ, ಉಡುಪಿ ಶಾಸಕ ಯಶ್ಪಾಲ್ ಸುವರ್ಣ ಸುವರ್ಣ, ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಪ್ರತಿಭಟನಾ ಸಭೆಯನ್ನುದ್ದೇಶಿಸಿ ಮಾತನಾಡಿ, ಮುಡ ಭೂ ಹಗರಣ, ವಾಲ್ಮೀಕಿ ನಿಗಮ ಹಗರಣ ಮುಂತಾದ ಹಗರಣದ ಸರಮಾಲೆಯನ್ನು ಹೊತ್ತಿರುವ ಲೂಟಿಕೋರ ರಾಜ್ಯ ಕಾಂಗ್ರೆಸ್ ಸರಕಾರದ ನೇತೃತ್ವ ವಹಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹಗರಣಗಳ ತನಿಖೆಯನ್ನು ಸಿಬಿಐಗೆ ವಹಿಸಿ, ನೈತಿಕ ಹೊಣೆ ಹೊತ್ತು ತಕ್ಷಣ ರಾಜೀನಾಮೆಯನ್ನು ಸಲ್ಲಿಸಿ ಹಗರಣಗಳ ನಿಷ್ಪಕ್ಷಪಾತ ತನಿಖೆಗೆ ಸಹಕರಿಸಬೇಕು ಎಂದು ಆಗ್ರಹಿಸಿದರು.
ಈ ಸಂದರ್ಭದಲ್ಲಿ ಬಿಜೆಪಿ ಮಾಜಿ ಜಿಲ್ಲಾಧ್ಯಕ್ಷರುಗಳಾದ ಮಟ್ಟಾರ್ ರತ್ನಾಕರ ಹೆಗ್ಡೆ, ತಿಂಗಳೆ ವಿಕ್ರಮಾರ್ಜುನ ಹೆಗ್ಡೆ, ಜಿಲ್ಲಾ ಉಪಾಧ್ಯಕ್ಷರುಗಳಾದ ಪ್ರಕಾಶ್ ಶೆಟ್ಟಿ ಪಾದೆಬೆಟ್ಟು, ಪೆರಣಂಕಿಲ ಶ್ರೀಶ ನಾಯಕ್, ಕಿರಣ್ ಕುಮಾರ್ ಬೈಲೂರು, ಜಯರಾಮ್ ಸಾಲ್ಯಾನ್, ಜಿಲ್ಲಾ ಪ್ರಧಾನ ಕಾರ್ಯದರ್ಶಿ ದಿನಕರ ಶೆಟ್ಟಿ ಹೆರ್ಗ, ಎಸ್.ಸಿ. ಮೋರ್ಚಾ ರಾಜ್ಯ ಉಪಾಧ್ಯಕ್ಷ ದಿನಕರ ಬಾಬು, ಯುವ ಮೋರ್ಚಾ ರಾಜ್ಯ ಕಾರ್ಯದರ್ಶಿ ವಿಖ್ಯಾತ್ ಶೆಟ್ಟಿ, ಬಿಜೆಪಿ ಜಿಲ್ಲಾ ಕಾರ್ಯದರ್ಶಿಗಳಾದ ಅನಿತಾ ಶ್ರೀಧರ್, ಶ್ರೀಕಾಂತ್ ನಾಯಕ್, ರಾಘವೇಂದ್ರ ಕುಂದರ್, ಜಿಲ್ಲಾ ಕಾರ್ಯಾಲಯ ಕಾರ್ಯದರ್ಶಿಗಳಾದ ಸತ್ಯಾನಂದ ನಾಯಕ್, ಶಿವಕುಮಾರ್ ಅಂಬಲಪಾಡಿ, ಜಿಲ್ಲಾ ವಕ್ತಾರೆ ಗೀತಾಂಜಲಿ ಎಮ್. ಸುವರ್ಣ, ಜಿಲ್ಲಾ ಮಾಧ್ಯಮ ಪ್ರಮುಖ್ ಶ್ರೀನಿಧಿ ಹೆಗ್ಡೆ, ಗಿರೀಶ್ ಎಮ್. ಅಂಚನ್, ಜಿಲ್ಲಾ ಯುವ ಮೋರ್ಚಾ ಅಧ್ಯಕ್ಷ ಪ್ರಥ್ವಿರಾಜ್ ಶೆಟ್ಟಿ ಬಿಲ್ಲಾಡಿ, ಪ್ರಧಾನ ಕಾರ್ಯದರ್ಶಿ ಅಭಿರಾಜ್ ಸುವರ್ಣ, ಜಿಲ್ಲಾ ಒಬಿಸಿ ಮೋರ್ಚಾ ಅಧ್ಯಕ್ಷ ವಿಜಯ ಕೊಡವೂರು, ಜಿಲ್ಲಾ ರೈತ ಮೋರ್ಚಾ ಅಧ್ಯಕ್ಷ ಕನ್ನಾರು ಕಮಲಾಕ್ಷ ಹೆಬ್ಬಾರ್, ಪ್ರಧಾನ ಕಾರ್ಯದರ್ಶಿ ಶ್ರೀಕಾಂತ್ ಕಾಮತ್, ಜಿಲ್ಲಾ ಮಹಿಳಾ ಮೋರ್ಚಾ ಪ್ರಧಾನ ಕಾರ್ಯದರ್ಶಿ ನಳಿನಿ ಪ್ರದೀಪ್ ರಾವ್, ಕಾಪು ಮಂಡಲ ಅಧ್ಯಕ್ಷ ಜಿತೇಂದ್ರ ಶೆಟ್ಟಿ, ಪ್ರಧಾನ ಕಾರ್ಯದರ್ಶಿಗಳಾದ ಗೋಪಾಲಕೃಷ್ಣರಾವ್ ಮಟ್ಟು, ಶರಣ್ ಮಟ್ಟು, ಉಡುಪಿ ಗ್ರಾಮಾಂತರ ಅಧ್ಯಕ್ಷ ರಾಜೀವ ಕುಲಾಲ್, ಪ್ರಧಾನ ಕಾರ್ಯದರ್ಶಿ ಸಚಿನ್ ಪೂಜಾರಿ, ಉಡುಪಿ ನಗರ ಪ್ರಧಾನ ಕಾರ್ಯದರ್ಶಿ ಜಗದೀಶ್ ಆಚಾರ್ಯ ಕಪ್ಪೆಟ್ಟು, ಪ್ರಮುಖರಾದ ಶ್ಯಾಮಲಾ ಎಸ್. ಕುಂದರ್, ವೀಣಾ ಎಸ್. ಶೆಟ್ಟಿ, ನೀರಜಾ ಶೆಟ್ಟಿ, ಹರೀಶ್ ಶೆಟ್ಟಿ ಚೇರ್ಕಾಡಿ, ನೀತಾ ಪ್ರಭು, ಪ್ರತಾಪ್ ಶೆಟ್ಟಿ ಚೇರ್ಕಾಡಿ, ಸೋನು ಪಾಂಗಾಳ, ಅಕ್ಷಿತ್ ಶೆಟ್ಟಿ ಹೆರ್ಗ, ಶ್ರೀವತ್ಸ, ನಿತಿನ್ ಪೈ, ಲಕ್ಷ್ಮೀಶ ಬಂಗೇರ, ಮೋಹನ್ ರಾವ್, ದಾವೂದ್ ಅಬೂಬಕರ್, ಸುಭಾಷಿತ್, ಚಿನ್ಮಯಮೂರ್ತಿ, ಕೃಷ್ಣಮೂರ್ತಿ ರಾವ್ ಸಹಿತ ಪಕ್ಷದ ಪ್ರಮುಖರು, ವಿವಿಧ ಸ್ತರದ ಪದಾಧಿಕಾರಿಗಳು, ಜನ ಪ್ರತಿನಿಧಿಗಳು ಮತ್ತು ಕಾರ್ಯಕರ್ತರು ಉಪಸ್ಥಿತರಿದ್ದರು.