ದ.ಕ, ಕೊಡಗು ಜಿಲ್ಲೆಯ ಶಾಲಾ ಕಾಲೇಜ್‌ಗಳಿಗೆ ಜು.16(ನಾಳೆ) ರಜೆ ಘೋಷಣೆ
ಮಂಗಳೂರು: ಕರಾವಳಿಯಲ್ಲಿ ಭಾರೀ ಮಳೆ ಸುರಿಯುತ್ತಿದ್ದು, ಹವಾಮಾನ ಇಲಾಖೆಯೂ ರೆಡ್ ಅಲರ್ಟ್ ಘೋಷಿಸಿದೆ. ನದಿಗಳು ಉಕ್ಕಿ ಹರಿಯುತ್ತಿದ್ದು ತಗ್ಗು ಪ್ರದೇಶಗಳು ಜಲಾವೃತ ವಾಗಿದೆ. ಮುಂಜಾಗೃತಾ ಕ್ರಮವಾಗಿ ದಕ್ಷಿಣ ಕನ್ನಡ ಮತ್ತು ಕೊಡಗು ಜಿಲ್ಲಾದ್ಯಂತ ಅಂಗನವಾಡಿ, ಶಾಲೆಗಳು ಮತ್ತು ಪಿಯುಸಿವರೆಗೆ ಜುಲೈ 16 (ಮಂಗಳವಾರ) ರಂದು ಜಿಲ್ಲಾಡಳಿತಗಳು ರಜೆ ಘೋಷಿಸಿವೆ.
ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಅವರು ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಿ ಆದೇಶ ಹೊರಡಿಸಿದ್ದಾರೆ.
ಕೊಡಗು ಜಿಲ್ಲೆಯಲ್ಲಿ ಧಾರಾಕಾರ ಮಳೆ ಮುಂದುವರೆದಿರುವ ಹಿನ್ನೆಲೆ ನಾಳೆ (ಜುಲೈ 16) ಅಂಗನವಾಡಿ, ಶಾಲಾ- ಕಾಲೇಜುಗಳಿಗೆ ರಜೆ ಎಂದು ಅಧಿಕಾರಿಗಳು ಪ್ರಕಟಿಸಿದ್ದಾರೆ. ಸೋಮವಾರ ಮೂರು ಜಿಲ್ಲೆಗಳಲ್ಲೂ ಭಾರೀ ಮಳೆ ಸುರಿದಿದ್ದು, ಜನರು ಎಚ್ಚರಿಕೆ ವಹಿಸಲು ಜಿಲ್ಲಾಡಳಿತ ಸೂಚನೆ ನೀಡಿದೆ.