ಉಡುಪಿ: ಮನೆಯಲ್ಲಿ ಅಗ್ನಿ ಅವಘಡ- ಬಾರ್ ಮಾಲೀಕರ ಪತ್ನಿ ಮೃತ್ಯು

Oplus_131072

ಉಡುಪಿ: ನಿನ್ನೆ ಮುಂಜಾನೆ ಅಂಬಲಪಾಡಿಯ ಬಾರ್ ಮಾಲೀಕರ ಮನೆಯಲ್ಲಿ ನಡೆದ ಅಗ್ನಿ ದುರಂತದಲ್ಲಿ ಮೃತಪಟ್ಟ ಮಾಲಕ ರಮಾನಂದ ಶೆಟ್ಟಿ ಅವರ ಪತ್ನಿ ಇಂದು ಚಿಕಿತ್ಸೆ ಫಲಕಾರಿಯಾಗದೆ ಮಣಿಪಾಲ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ.

ಅಗ್ನಿ ಅವಘಡದಲ್ಲಿ ಉಸಿರಾಟದ ತೊಂದರೆಯಿಂದಾಗಿ ಬಹು ಅಂಗಾಂಗ ವೈಫಲ್ಯವಾಗಿ ಅಶ್ವಿನಿ ಶೆಟ್ಟಿ ಇವರು ಇಂದು ಮಧ್ಯಾಹ್ನ ಇಹಲೋಕ ತ್ಯಜಿಸಿದರು.

ದಂಪತಿಗಳ ಅಂತಿಮ ದರ್ಶನ ಸಂಜೆ 5.30ಕ್ಕೆ ಪಂದುಬೆಟ್ಟಿನ ಮನೆಯಲ್ಲಿ ವ್ಯವಸ್ಥೆ ಮಾಡಲಾಗಿದೆಂದು ಕುಟುಂಬ ಮೂಲಗಳು ತಿಳಿಸಿವೆ.

ಮೃತ ದಂಪತಿಗಳು ಓರ್ವ ಪುತ್ರಿ, ಓರ್ವ ಪುತ್ರ ಸಹಿತ ಅಪಾರ ಬಂಧು ಬಳಗವನ್ನು ಅಗಲಿದ್ದಾರೆ.

ಉಡುಪಿ ನಗರ ಮಹಿಳಾ ಮೋರ್ಚಾ ಅಧ್ಯಕ್ಷೆ ಅಶ್ವಿನಿ ಅವರ ನಿಧನಕ್ಕೆ ಬಿ.ವೈ.ವಿಜಯೇಂದ್ರ ಸಂತಾಪ

ಬೆಂಗಳೂರು: ಬಿಜೆಪಿಯ ಉಡುಪಿ ನಗರ ಮಹಿಳಾ ಮೋರ್ಚಾ ಅಧ್ಯಕ್ಷೆ ಅಶ್ವಿನಿ ಅವರ ನಿಧನಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು ತೀವ್ರ ಸಂತಾಪ ಸೂಚಿಸಿದ್ದಾರೆ.

ಅಶ್ವಿನಿ ಅವರು ಮಹಿಳಾ ಮೋರ್ಚಾದ ಮೂಲಕ ಪಕ್ಷ ಸಂಘಟನೆಯಲ್ಲಿ ಪ್ರಮುಖ ಪಾತ್ರ ವಹಿಸಿದ್ದರು ಎಂದಿರುವ ಅವರು, ಅವರ ಕುಟುಂಬಸ್ಥರು ಬಂಧುಗಳು, ಹಿತೈಷಿಗಳಿಗೆ ಅಗಲಿಕೆಯ ನೋವು ಸಹಿಸುವ ಶಕ್ತಿಯನ್ನು ಭಗವಂತನು ಕರುಣಿಸಲಿ. ಅವರ ಆತ್ಮಕ್ಕೆ ಚಿರಶಾಂತಿ ದೊರೆಯಲಿ ಎಂದು ಪ್ರಾರ್ಥಿಸಿದ್ದಾರೆ. 

Leave a Reply

Your email address will not be published. Required fields are marked *

error: Content is protected !!