ಕನ್ನಡ ರಾಜ್ಯೋತ್ಸವದ ಅಂಗವಾಗಿ ಕನ್ನಡ ಪುಸ್ತಕ ರಿಯಾಯಿತಿ ದರಗಳಲ್ಲಿ ಮಾರಾಟ
ಉಡುಪಿ (ಉಡುಪಿ ಟೈಮ್ಸ್ ವರದಿ): ಕನ್ನಡ ರಾಜ್ಯೋತ್ಸವದ ಅಂಗವಾಗಿ ನವೆಂಬರ್ ತಿಂಗಳಿನಲ್ಲಿ ಕನ್ನಡ ಪುಸ್ತಕ ಪ್ರಾಧಿಕಾರದ ಎಲ್ಲಾ ಪುಸ್ತಕಗಳನ್ನು ಶೇ.50%ರ ರಿಯಾಯಿತಿ ದರಗಳಲ್ಲಿ ಮಾರಾಟ ಮಾಡಲಾಗುತ್ತದೆ.
ಬೆಂಗಳೂರಿನ ಕನ್ನಡ ಭವನದ ಸಿರಿಗನ್ನಡ ಪುಸ್ತಕ ಮಳಿಗೆಯಲ್ಲಿ, ಜಿಲ್ಲೆಗಳ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರ ಕಚೇರಿಯಲ್ಲಿ, ಕನ್ನಡ ಪುಸ್ತಕ ಪ್ರಾಧಿಕಾರದಿಂದ ತೆರೆಯಲಾದ ಸಿರಿಗನ್ನಡ ಪುಸ್ತಕ ಮಾರಾಟ ಮಳಿಗೆಗಳಲ್ಲಿ ಹಾಗೂ ಕನ್ನಡ ಪುಸ್ತಕ ಪ್ರಾಧಿಕಾರದ ವೆಬ್‌ಸೈಟ್ www.kannadapustakapradhikara.com ನಲ್ಲಿ ಶೇ.50% ರಿಯಾಯಿತಿ ಲಭ್ಯವಿದ್ದು, ಪುಸ್ತಕಗಳನ್ನು ಆನ್‌ಲೈನ್ ಮೂಲಕ ಹಣ ಪಾವತಿಸಿ ಅಂಚೆ ಮೂಲಕ ಪಡೆಯಬಹುದಾಗಿದೆ ಎಂದು ಕನ್ನಡ ಪುಸ್ತಕ ಪ್ರಾಧಿಕಾರದ ಆಡಳಿತಾಧಿಕಾರಿ ಕೆ.ಬಿ. ಕಿರಣ್ ಸಿಂಗ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.