ಜು19: ಉದ್ಯಾವರದಲ್ಲಿ ಡೆಂಗ್ಯೂ ಜ್ವರದ ಬಗ್ಗೆ ಮಾಹಿತಿ ಮತ್ತು ಜಾಗೃತಿ ಕಾರ್ಯಕ್ರಮ

ಉಡುಪಿ: ಕರ್ನಾಟಕ ರಾಜ್ಯ ಸರಕಾರದ ಸೂಚನೆಯಂತೆ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಮತ್ತು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಉಡುಪಿ ಜಿಲ್ಲೆ ಇವರ ನೇತೃತ್ವದಲ್ಲಿ ಲಯನ್ಸ್ ಕ್ಲಬ್ ಉದ್ಯಾವರ ಸನ್ ಶೈನ್, ರೋಟರಿ ಕ್ಲಬ್ ಉದ್ಯಾವರ ಹಾಗೂ ಗ್ರಾಮ ಪಂಚಾಯತ್ ಉದ್ಯಾವರ ಇವರ ಜಂಟಿ ಆಶ್ರಯದಲ್ಲಿ ಜುಲೈ 19 ಶುಕ್ರವಾರದಂದು ಉದ್ಯಾವರ ಗ್ರಾಮ ಪಂಚಾಯತ್ ಬಳಿಯ ಕಾಲೋನಿಯಲ್ಲಿ ಡೆಂಗ್ಯೂ ಜ್ವರದ ನಿಯಂತ್ರಣದ ಬಗ್ಗೆ ಮಾಹಿತಿ ಮತ್ತು ಜಾಗೃತಿ ಕಾರ್ಯಕ್ರಮವು ನಡೆಯಲಿದೆ ಎಂದು ಪ್ರಕಟಣೆ ತಿಳಿಸಿದೆ.

ಉಡುಪಿ ಜಿಲ್ಲಾಧಿಕಾರಿ ಡಾ.ವಿದ್ಯಾಕುಮಾರಿ ಕೆ., ಉಡುಪಿ ಜಿಲ್ಲಾ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರತೀಕ್ ಬಾಯಲ್ ಭಾಗವಹಿಸುತ್ತಿರುವ ಈ ಕಾರ್ಯಕ್ರಮವು ಬೆಳಿಗ್ಗೆ ಗಂಟೆ 9.45ಕ್ಕೆ ಸರಿಯಾಗಿ ಆರಂಭವಾಗಲಿದೆ. ಮಾಹಿತಿ ಕಾರ್ಯಕ್ರಮದ ಬಳಿಕ ಮನೆಮನೆ ಭೇಟಿಗೆ ನೀಡಿ ಡೆಂಗ್ಯೂ ಜ್ವರದ ಬಗ್ಗೆ ಜಾಗೃತಿ ಮೂಡಿಸುವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. ಕಾರ್ಯಕ್ರಮದಲ್ಲಿ ಜಿಲ್ಲಾ ಆರೋಗ್ಯ ಅಧಿಕಾರಿ ಡಾ. ಈಶ್ವರ್ ಗಡಾದ, ಜಿಲ್ಲಾ ರೋಗವಾಹಕ ಆಶ್ರುತ ರೋಗಗಳ ನಿರ್ವಹಣಾಧಿಕಾರಿ ಡಾ. ಪ್ರಶಾಂತ್ ಭಟ್, ಜಿಲ್ಲೆ 317C ಲಯನ್ ಮುಂದಾಳು ಲಯನ್ ಹರಿಪ್ರಸಾದ್ ರೈ, ಗ್ರಾಮ ಪಂಚಾಯತ್ ಅಧ್ಯಕ್ಷೆ, ಉಪಾಧ್ಯಕ್ಷ, ಪಿಡಿಒ, ಜನಪ್ರತಿನಿಧಿಗಳು ಸಹಿತ ಹಲವಾರು ಗಣ್ಯರು ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.

Leave a Reply

Your email address will not be published. Required fields are marked *

error: Content is protected !!