ಕರಾವಳಿಯ ಬಂದರುಗಳಲ್ಲಿ ಸೈಕ್ಲೋನ್ ಎಚ್ಚರಿಕೆಯ ಸಿಗ್ನಲ್!
ಉಡುಪಿ, ಜು.18: ರಾಜ್ಯದ ಪಶ್ಚಿಮ ಕರಾವಳಿಯಲ್ಲಿರುವ ಬಂದರುಗಳಾದ ಕಾರವಾರ, ಮಂಗಳೂರು, ಪಣಂಬೂರು, ಹೊನ್ನಾವರ, ಭಟ್ಕಳ, ಗಂಗೊಳ್ಳಿ ಹಾಗೂ ಮಲ್ಪೆ ಬಂದರುಗಳಲ್ಲಿ ಸೈಕ್ಲೋನ್ ಎಚ್ಚರಿಕೆಯ ಸೂಚನೆ ಹಾರಿಸುವಂತೆ ಸಂಬಂಧಿತ ಬಂದರು ಅಧಿಕಾರಿಗಳಿಗೆ ಹವಾಮಾನ ಇಲಾಖೆ ಸೂಚನೆಗಳನ್ನು ನೀಡಿದೆ.
ಪಶ್ಚಿಮ ಕರಾವಳಿಯಲ್ಲಿ ಗಂಟೆಗೆ 35ರಿಂದ 45 ಕ.ಮೀ. ವೇಗದ ಬಿರುಗಾಳಿ ಬೀಸುವ ಸಾಧ್ಯತೆಯ ಹಿನ್ನೆಲೆಯಲ್ಲಿ ಕರ್ನಾಟಕ, ಕೇರಳ ಹಾಗೂ ಲಕ್ಷದ್ವೀಪಗಳ ತೀರದ ಬಂದರುಗಳಿಗೆ ಈ ಸೂಚನೆಗಳನ್ನು ನೀಡಲಾಗಿದೆ ಎಂದು ಹವಾಮಾನ ಕೇಂದ್ರ ತಿಳಿಸಿದೆ.
ಇದೇ ವೇಳೆ ರಾಜ್ಯದ ಕರಾವಳಿ ತೀರದ ಮೀನುಗಾರರಿಗೂ ಕಡಲಿಗೆ ಇಳಿಯದಂತೆ ಎಚ್ಚರಿಕೆ ನೀಡಲಾಗಿದ್ದು, ಕಡಲು ಪ್ರಕ್ಷುಬ್ಧ ವಾಗಿರಲಿದ್ದು, ತೀರದಲ್ಲಿ ಯಾವುದೇ ಚಟುವಟಿಕೆಗಳನ್ನು ನಡೆಸದಂತೆ ತಿಳಿಸಲಾಗಿದೆ. ನಾಳೆಗೂ ರಾಜ್ಯ ಕರಾವಳಿಯ ಮೂರು ಜಿಲ್ಲೆಗಳಿಗೆ ರೆಡ್ ಅಲರ್ಟ್‌ನ್ನು ಘೋಷಿಸಲಾಗಿದೆ.”