ಮಂಗಳೂರು: ವಿದ್ಯುತ್ ಶಾಕ್ ತಗುಲಿದ ಸಾಕು ನಾಯಿ ರಕ್ಷಿಸಲು ಹೋದ ಸಿಎ ವಿದ್ಯಾರ್ಥಿನಿ ಮೃತ್ಯು
ಮಂಗಳೂರು: ದನ ಕಟ್ಟಿ ಮನೆಗೆ ಹೋಗುತ್ತಿದ್ದ ವೇಳೆ ತುಂಡಾಗಿ ಬಿದ್ದಿದ್ದ ವಿದ್ಯುತ್ ತಂತಿ ತುಳಿದು ಸಿ.ಎ ವಿದ್ಯಾರ್ಥಿನಿಯೋರ್ವಳು ಮೃತಪಟ್ಟ ಘಟನೆ ಗುರುಪುರ ಗ್ರಾಮ ಪಂಚಾಯತ್ ವ್ಯಾಪ್ತಿಯ ಮೂಳೂರು ಗ್ರಾಮದ ಕಲ್ಲಕಲಂಬಿಯಲ್ಲಿ ನಡೆದಿದೆ.
ಆಶ್ನಿ (21) ಮೃತಪಟ್ಟ ನತದೃಷ್ಟೆ. ತಂದೆಯೊಂದಿಗೆ ಗದ್ದೆಗೆ ಹೋಗಿದ್ದ ಆಶ್ನಿ ಜೊತೆಗೆ ಮನೆಯ ಸಾಕು ನಾಯಿ ಕೂಡಾ ತೆರಳಿದ್ದು, ನಾಯಿಗೆ ಮೊದಲು ವಿದ್ಯುತ್ ಶಾಕ್ ತಗುಲಿದೆ. ಶಾಕ್ ಹೊಡೆದಿದ್ದರಿಂದ ನಾಯಿ ಗದ್ದೆಯಲ್ಲಿ ಬಿದ್ದು ಹೊರಳಾಡುವುದನ್ನು ನೋಡಿ ಆಶ್ನಿ ನಾಯಿಯ ರಕ್ಷಣೆಗೆ ಮುಂದಾಗಿದ್ದು ಈ ವೇಳೆ ಗಮನಿಸದೇ ತುಂಡಾಗಿ ಬಿದ್ದಿದ್ದ ತಂತಿ ತುಳಿದು ಶಾಕ್ ಗೆ ಒಳಗಾಗಿ ಮೃತಪಟ್ಟಿದ್ದಾಳೆ.
ಭಾರೀ ಪ್ರಮಾಣದಲ್ಲಿ ಗಾಳಿ ಮತ್ತು ಮಳೆಯಿಂದ ವಿದ್ಯುತ್ ತಂತಿ ತುಂಡಾಗಿ ಗದ್ದೆಯಲ್ಲಿ ಬಿದ್ದಿದ್ದರಿಂದ ಈ ಅನಾಹುತ ನಡೆದಿದೆ.