ಸಂಸದರ ಮನವಿ ಬೆನ್ನಲ್ಲೇ ಮಂಗಳೂರು ಬೆಂಗಳೂರು ಮಧ್ಯೆ ವಿಶೇಷ ರೈಲು ಸಂಚಾರ

ಮಂಗಳೂರು: ಕಳೆದ ಕೆಲ ದಿನಗಳಿಂದ ನಿರಂತರ ಎಡಬಿಡದೆ ಸುರಿಯುತ್ತಿರುವ ಮಳೆಯಿಂದಾಗಿ ಶಿರಾಡಿ ಘಾಟಿ ಸೇರಿದಂತೆ ಮಂಗಳೂರು ಮತ್ತು ಬೆಂಗಳೂರನ್ನು ಸಂಪರ್ಕಿಸುವ ಮುಖ್ಯ ಎರಡು ರಾಷ್ಟೀಯ ಹೆದ್ದಾರಿಗಳಲ್ಲಿ ಗುಡ್ಡ ಕುಸಿತದಿಂದ ವಾಹನ ಸಂಚಾರಕ್ಕೆ ಸಮಸ್ಯೆಯಾಗಿದ್ದು, ಈ ಹಿನ್ನೆಲೆಯಲ್ಲಿ ಮಂಗಳೂರು- ಬೆಂಗಳೂರು ನಡುವೆ ಹೆಚ್ಚುವರಿ ರೈಲು ಸೇವೆಯನ್ನು ತುರ್ತಾಗಿ ಪ್ರಾರಂಭಿಸುವಂತೆ ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರು ನೈಋತ್ಯ ರೈಲ್ವೆ ಜನರಲ್ ಮ್ಯಾನೇಜರ್ ಮತ್ತು ಮೈಸೂರು ಡಿಆರ್‌ಎಂ ಅವರಿಗೆ ಪತ್ರ ಬರೆದು ಮನವಿ ಮಾಡಿದ್ದರು.

ಕ್ಯಾಪ್ಟನ್ ಬ್ರಿಜೇಶ್ ಚೌಟ ಅವರ ಮನವಿಗೆ ಸ್ಪಂದಿಸಿದ ರೈಲ್ವೆ ಅಧಿಕಾರಿಗಳು ಬೆಂಗಳೂರು ಮಂಗಳೂರು ನಡುವೆ ವಿಶೇಷ ರೈಲು ಓಡಿಸಲು ನಿರ್ಧರಿಸದ್ದಾರೆ.

ಸಂಚರಿಸಲಿರುವ ರೈಲುಗಳು :

ಜು. 19ರಂದು ರೈಲು ಸಂಖ್ಯೆ 06547 ಎಸ್‌ಬಿಸಿ ಬೆಂಗಳೂರಿನಿಂದ ಹೊರಡಲಿದೆ.

ಜು.20ರಂದು ರೈಲು ಸಂಖ್ಯೆ 06548 ಮಂಗಳೂರು ಜಂಕ್ಷನ್‌ನಿಂದ ಯಶವಂತಪುರಕ್ಕೆ ತೆರಳಲಿದೆ.

ಜು.21 ಹಾಗೂ 22ರಂದು ರೈಲು ಸಂಖ್ಯೆ 06549 ಯಶವಂತಪುರದಿಂದ ಮಂಗಳೂರು ಜಂಕ್ಷನ್‌ಗೆ ಬರಲಿದೆ.

ಜು.21 ಹಾಗೂ 22 ರಂದು ರೈಲು ಸಂಖ್ಯೆ 06550 ಮಂಗಳೂರು ಜಂಕ್ಷನ್‌ನಿಂದ ಯಶವಂತಪುರಕ್ಕೆ ತಲುಪಲಿದೆ.

Leave a Reply

Your email address will not be published. Required fields are marked *

error: Content is protected !!