ಭಟ್ಕಳ: ಜು.21-ಆ.30 ಶ್ರೀಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರ ಚಾತುರ್ಮಾಸ್ಯ ವ್ರತಾರಂಭ

Oplus_131072

ಉಡುಪಿ ಜು.21(ಉಡುಪಿ ಟೈಮ್ಸ್ ವರದಿ): ಧರ್ಮಸ್ಥಳದ ಶ್ರೀ ರಾಮ ಕ್ಷೇತ್ರ ಮಹಾ ಸಂಸ್ಥಾನಮ್‌ನ ಜಗದ್ಗುರು ಪೀಠದ ಪೀಠಾಧೀಶರಾದ ಸದ್ಗುರು ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರ ಚಾತುರ್ಮಾಸ್ಯ ವ್ರತಾರಂಭ ಜು.21 ರಿಂದ ಆ.30 ರ ವರೆಗೆ ಭಟ್ಕಳದ ಕರಿಕಲ್ ಶಾಖಾ ಮಠದಲ್ಲಿ ನಡೆಯಲಿದೆ.

ಕಾರ್ಯಕ್ರಮವನ್ನು ಮೀನುಗಾರಿಕೆ ಮತ್ತು ಬಂದರು ಹಾಗೂ ಒಳನಾಡು ಜಲಸಾರಿಗೆ ಇಲಾಖೆಯ ಸಚಿವ ಹಾಗೂ ಉತ್ತರ ಕನ್ನಡ ಜಿಲ್ಲೆಯ ಉಸ್ತುವಾರಿ ಸಚಿವ ಮಾಂಕಾಳ್ ಎಸ್.ವೈದ್ಯ ಅವರು ಉದ್ಘಾಟಿಸಲಿದ್ದಾರೆ. ಉತ್ತರ ಕನ್ನಡ ಜಿಲ್ಲೆಯ ಲೋಕ ಸಭಾ ಸದಸ್ಯ ವಿಶ್ವೇಶ್ವರ ಹೆಗಡೆ ಕಾಗೇರಿ ಅವರು ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಲಿದ್ದಾರೆ.

ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಇಲಾಖೆ ಸಚಿವ ಮಧು ಬಂಗಾರಪ್ಪ, ಶಿವಮೊಗ್ಗ ಲೋಕಸಭಾ ಸದಸ್ಯ ರಾಘವೇಂದ್ರ, ಉಡುಪಿ ಲೋಕ ಸಭಾ ಸದಸ್ಯ ಕೋಟ ಶ್ರೀನಿವಾಸ ಪೂಜಾರಿ, ಮಂಗಳೂರು ಲೋಕಸಭಾ ಸದಸ್ಯ ಬ್ರಿಜೇಶ್ ಚೌಟ, ಮಾಜಿ ಸಂಸದ ನಳಿನ್ ಕುಮಾರ್ ಕಟೀಲ್, ವಿಧಾನ ಪರಿಷತ್ ಸದಸ್ಯ ಹರಿಪ್ರಸಾದ್, ಕಾರ್ಕಳ ಶಾಸಕ ಸುನೀಲ್ ಕುಮಾರ್, ಅರಣ್ಯ ಕೈಗಾರಿಕಾ ಅಭಿವೃದ್ಧಿ ನಿಗಮದ ಅಧ್ಯಕ್ಷ ಬೇಲೂರು ಗೋಪಾಲ ಕೃಷ್ಣ, ಸಿರ್ಸಿ ಶಾಸಕ ಭೀಮಣ್ಣ ಸಿರ್ಸಿ, ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ, ಮಾಜಿ ಮಂತ್ರಿಗಳಾದ ಹರತಾಳು ಹಾಲಪ್ಪ, ಕುಮಟಾ ಶಾಸಕ ದಿನಕರ ಶೆಟ್ಟಿ, ಯಲ್ಲಾಪುರ ಶಾಸಕ ಶಿವರಾಮ ಹೆಬ್ಬಾರ್, ಕಾರವಾರ ಶಾಸಕ ಸತೀಶ್ ಶೈಲ್, ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹರೀಶ್ ಕುಮಾರ್, ಭಟ್ಕಳ ಮಾಜಿ ಶಾಸಕ ಸುನೀಲ್ ನೈಕ, ಜೆಡಿ ನೈಕ, ಮಾಜಿ ಸಚಿವ ಶಿವಾನಂದ ನೈಕ ಅವರು ಮುಖ್ಯ ಅಥಿತಿಗಳಾಗಿ ಭಾಗವಹಿಸಲಿದ್ದಾರೆ.

Leave a Reply

Your email address will not be published. Required fields are marked *

error: Content is protected !!