ಮಹಾಲಕ್ಷ್ಮೀ ಕೋ ಆ.ಬ್ಯಾಂಕ್ ಲಿ. ಅರ್ಧ ವಾರ್ಷಿಕದಲ್ಲಿ ರೂ.2.59 ಕೋಟಿ ಲಾಭ: ಯಶ್‌ಪಾಲ್ ಸುವರ್ಣ
ಉಡುಪಿ: ಕರಾವಳಿ ಭಾಗದ ಪ್ರತಿಷ್ಟಿತ ಪಟ್ಟಣ ಸಹಕಾರಿ ಸಂಸ್ಥೆಗಳಲ್ಲಿ ಒಂದಾದ ಮಹಾಲಕ್ಷ್ಮೀ ಕೋ ಆಪರೇಟಿವ್ ಬ್ಯಾಂಕ್ 2020-21ನೇ ಸಾಲಿನ ಅರ್ಧವಾರ್ಷಿಕದಲ್ಲಿ ಕೋವಿಡ್-19 ಸಂಧಿಗ್ದ ಪರಿಸ್ಥಿತಿಯಲ್ಲಿಯೂ ಸುಮಾರು ರೂ. 502.25 ಕೋಟಿ ವ್ಯವಹಾರ ನಡೆಸಿ ರೂ. 2.59 ಕೋಟಿ ಒಟ್ಟು ಲಾಭ ದಾಖಲಿಸಿರುವುದಾಗಿ ಬ್ಯಾಂಕಿನ ಅಧ್ಯಕ್ಷರಾದ ಯಶ್‌ಪಾಲ್ ಎ ಸುವರ್ಣ ತಿಳಿಸಿದ್ದಾರೆ.
ಮಹಾಲಕ್ಷ್ಮೀ ಕೋ ಆಪರೇಟಿವ್ ಬ್ಯಾಂಕ್ ಸಹಕಾರಿ ಇಲಾಖೆ ಹಾಗೂ ಭಾರತೀಯ ರಿಸರ್ವ್ ಬ್ಯಾಂಕಿನ ಪರಿವೀಕ್ಷಣೆಗೆ ಒಳಪಟ್ಟು ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 8 ಶಾಖೆಗಳ ಮೂಲಕ 25000 ಸದಸ್ಯರನ್ನೊಳಗೊಂಡು 30000 ಗ್ರಾಹಕರು ಬ್ಯಾಂಕಿನಲ್ಲಿ ವ್ಯವಹರಿಸುತ್ತಿದ್ದಾರೆ. ಬ್ಯಾಂಕ್ 20220-21ನೇ ಸಾಲಿನ ಅರ್ಧ ವಾರ್ಷಿಕದಲ್ಲಿ 200 ಕೋಟಿಗೂ ಮಿಕ್ಕಿ ಠೇವಣಿ ಸಂಗ್ರಹಣೆ ಹಾಗೂ 140 ಕೋಟಿ ಮುಂಗಡದೊಂದಿಗೆ, ಪ್ರಸ್ತುತ ಅರ್ಧವಾರ್ಷಿಕ ಅವಧಿಯಲ್ಲಿ ಠೇವಣಿ ಸಂಗ್ರಹಣೆಯಲ್ಲಿ 19.39%, ಸಾಲ ಮತ್ತು ಮುಂಗಡದಲ್ಲಿ 6.63% ಪ್ರಗತಿ ಸಾಧಿಸಿರುವುದಾಗಿ ತಿಳಿಸಿದ್ದಾರೆ.
ಕಳೆದ 11ವರ್ಷಗಳಿಂದ ನಿರಂತರವಾಗಿ ಸದಸ್ಯರಿಗೆ 18% ಡಿವಿಡೆಂಡ್ ನೀಡುವ ಕರಾವಳಿ ಭಾಗದ ಏಕೈಕ ಪಟ್ಟಣ ಸಹಕಾರಿ ಬ್ಯಾಂಕ್ ಎಂಬ ಹೆಗ್ಗಳಿಕೆ ಪಾತ್ರವಾಗಿದ್ದು, ಬ್ಯಾಂಕ್ ಆರ್ಥಿಕ ಸದೃಡಗೊಳ್ಳುತ್ತಿರುವ ದೃಷ್ಟಿಯಿಂದ ಅಧಿಕೃತ ಪಾಲು ಬಂಡವಾಳವನ್ನು ರೂ. 50 ಕೋಟಿಗೆ ನಿಗದಿಪಡಿಸಲಾಗಿದೆ. ಒಬ್ಬ ಸದಸ್ಯ ರೂ.10ಲಕ್ಷ ಪಾಲು ಬಂಡವಾಳವನ್ನು ಹೊಂದಲು ಅವಕಾಶ ಕಲ್ಪಿಸಲಾಗಿಲಾಗಿದೆ.
ಶಾಸನಬದ್ಧ ಲೆಕ್ಕಪರಿಶೋಧನೆಯಲ್ಲಿ ‘ಎ’ ಶ್ರೇಣಿಯನ್ನು ಪಡೆದಿದ್ದು, HDFC ಬ್ಯಾಂಕಿನ ಒಡಂಬಡಿಕೆಯೊಂದಿಗೆ ATM ಸೌಲಭ್ಯ, ಮೊಬೈಲ್ ಬ್ಯಾಂಕಿಂಗ್ ಸೇವೆಗಳನ್ನು ಅಳವಡಿಕೊಳ್ಳಲಾಗಿದೆ. ಕೊರೋನಾ ಸಂದಿಗ್ಧ ಪರಿಸ್ಥಿತಿಯಲ್ಲಿ ವ್ಯಾಪಾರಸ್ಥರಿಗೆ ಹಾಗೂ ಬಡ ಮಹಿಳಾ ಮೀನು ಮಾರಾಟಗಾರರಿಗೆ ಉತ್ತೇಜನ ನೀಡುವ ದೃಷ್ಟಿಯಲ್ಲಿ ರೂ.2 ಲಕ್ಷದವರೆಗೆ ಶೇ.1.30 ಮಾಸಿಕ ಬಡ್ಡಿದರದಲ್ಲಿ ಕೋವಿಡ್-19 ಎಕ್ಸ್‌ಪ್ರೆಸ್ಸ್ ಸಾಲ ಯೋಜನೆ ರೂಪಿಸಲಾಗಿದೆ.
ಭಾರತೀಯ ರಿಸರ್ವ್ ಬ್ಯಾಂಕಿನ ಆದೇಶದನ್ವಯ 100 ಕೋಟಿಗೂ ಮಿಕ್ಕಿ ಠೇವಣಿ ಹೊಂದಿರುವ ಎಲ್ಲಾ ಪಟ್ಟಣ ಸಹಕಾರಿ ಬ್ಯಾಂಕ್ ಕಡ್ಡಾಯವಾಗಿ ಬೋರ್ಡ್ ಆಫ್ ಮ್ಯಾನೇಜ್‌ಮೆಂಟ್ ಹೊಂದಿರಬೇಕಾಗಿದ್ದು, ಇದರ ರಚನೆಯ ಪ್ರಕ್ರಿಯೆಗೆ ಕಾರ್ಯ ಪ್ರವೃತ್ತರಾಗಿದ್ದು, ಪ್ರಸಕ್ತ ಸಾಲಿನಲ್ಲಿ ಬ್ಯಾಂಕಿನ ವ್ಯವಹಾರ ಕ್ಷೇತ್ರವನ್ನು ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯ ಎಲ್ಲಾ ತಾಲೂಕುಗಳಿಗೆ ವಿಸ್ತರಿಸಲಾಗಿದೆ. ಮುಂಬರುವ ದಿನಗಳಲ್ಲಿ ಉತ್ತರ ಕನ್ನಡ ಹಾಗೂ ರಾಜಧಾನಿ ಬೆಂಗಳೂರಿನಲ್ಲಿಯೂ ಶಾಖೆಗಳನ್ನು ಆರಂಭಿಸಿ ವ್ಯವಹಾರ ಕ್ಷೇತ್ರವನ್ನು ವಿಸ್ತರಿಸುವ ಯೋಜನೆ ಆಡಳಿತ ಮಂಡಳಿಯ ಮುಂದಿರುವುದಾಗಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.