500 ಉನ್ನತ ಕಂಪನಿಗಳಲ್ಲಿ 1 ಕೋಟಿ ಯುವಕರಿಗೆ ಇಂಟರ್ನ್‌ಶಿಪ್, ಮುದ್ರಾ ಸಾಲದ ಮಿತಿ 20 ಲಕ್ಷಕ್ಕೆ ಏರಿಕೆ
ಹೊಸದಿಲ್ಲಿ : ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ನರೇಂದ್ರ ಮೋದಿ ನೇತೃತ್ವದ ಮೂರನೇ ಅವಧಿಯ ಸರಕಾರದ ಮೊದಲ ಬಜೆಟ್ ಅನ್ನು ಮಂಡಿಸುತ್ತಿದೆ. ಆಂಧ್ರ ಪ್ರದೇಶಕ್ಕೆ 15 ಸಾವಿರ ಕೋಟಿ ವಿಷೇಷ ಪ್ಯಾಕೇಜ್ ಘೋಷಣೆ ಮಾಡಲಾಗಿದೆ.
ಮುಂದಿನ 5 ವರ್ಷಗಳಲ್ಲಿ 500 ಉನ್ನತ ಕಂಪನಿಗಳಲ್ಲಿ 1 ಕೋಟಿ ಯುವಕರಿಗೆ ಇಂಟರ್ನ್‌ಶಿಪ್ ಅವಕಾಶಗಳನ್ನು ಒದಗಿಸುವ ಯೋಜನೆಯನ್ನು ಸರ್ಕಾರ ಪ್ರಾರಂಭಿಸಲಿದೆ.
ವಿಶಾಖಪಟ್ಟಣ ಚೆನ್ನೈ ಕೈಗಾರಿಕಾ ಕಾರಿಡಾರ್, ಹೈದರಾಬಾದ್ ಬೆಂಗಳೂರು ಕೈಗಾರಿಕಾ ಕಾರಿಡಾರ್ ನಿರ್ಮಾಣ ಮಾಡುವುದಾಗಿ ಬಜೆಟ್ನಲ್ಲಿ ನಿರ್ಮಲಾ ಸೀತಾರಾಮನ್ ಘೋಷಣೆ ಮಾಡಿದರು. 26 ಸಾವಿರ ಕೋಟಿ ವೆಚ್ಚದಲ್ಲಿ ರೈಲು ಯೋಜನೆಗಳ ಆರಂಭ, ಆಂಧ್ರಪ್ರದೇಶಕ್ಕೆ ವಿಶೇಷ ಸ್ಥಾನಮಾನ ನೀಡಲಾಗುವುದು ಎಂದ ಅವರು, ಆಂಧ್ರಪ್ರದೇಶ ಸರ್ವಾಂಗೀಣ ಅಭಿವೃದ್ಧಿಗೆ ನಮ್ಮ ಸರ್ಕಾರ ಬದ್ಧವಾಗಿದೆ ಎಂದರು. ಇಂಧನ, ರೈಲು, ರಸ್ತೆ ಅಭಿವೃದ್ಧಿಗಾಗಿ ಆದ್ಯತೆ ನೀಡಲಾಗುವುದು, ಪೋಲಾವರಂ ಪ್ರಾಜೆಕ್ಟ್ಗೆ ಕೇಂದ್ರ ಸರ್ಕಾರದಿಂದ ಅನುದಾನ ನೀಡಲಾಗುವುದು ಎಂದರು.
ದೇಶದಲ್ಲಿ 12 ಹೊಸ ಇಂಡಸ್ಟ್ರಿಯಲ್ ಪಾರ್ಕ್ಗಳ ನಿರ್ಮಾಣ ಮಾಡಲಾಗುವುದು. ಕೈಗಾರಿಕೆಗಳಲ್ಲಿ ಇಂಟರ್ನಶಿಪ್ ಮಾಡುವವರಿಗೆ 5 ಸಾವಿರ ರೂ. ಸಹಾಯಧನ, ಮುದ್ರಾ ಯೋಜನೆಯ ಸಾಲ ರೂ.10 ಲಕ್ಷದಿಂದ ರೂ.20 ಲಕ್ಷಕ್ಕೆ ಹೆಚ್ಚಿಸಲು ನಿರ್ಧಾರ, ದೇಶಾದ್ಯಂತ 26 ಸಾವಿರ ಕೋಟಿ ರೂ. ವೆಚ್ಚದಲ್ಲಿ ರೈಲ್ವೆ ಯೋಜನೆ, ಗ್ರಾಮೀಣಾವೃದ್ಧಿ ಪ್ರದೇಶದ ಅಭಿವೃದ್ಧಿಗೆ 2.66 ಲಕ್ಷ ಕೋಟಿ ರೂ. ಅನುದಾನವನ್ನು ವಿತ್ತ ಸಚಿವರು ಬಜೆಟ್ನಲ್ಲಿ ಘೋಷಿಸಿದರು.
ಬಜೆಟ್‌ನ ಪ್ರಮುಖ ಘೋಷಣೆಗಳು
- ಬಿಹಾರ, ಜಾರ್ಖಂಡ್, ಪಶ್ಚಿಮ ಬಂಗಾಳ, ಒಡಿಶಾ ಮತ್ತು ಆಂಧ್ರಪ್ರದೇಶಗಳ ಸರ್ವತೋಮುಖ ಅಭಿವೃದ್ಧಿಗಾಗಿ ಪೂರ್ವೋದಯ ಯೋಜನೆಯನ್ನು ಸಿದ್ದಪಡಿಸುವಿಕೆ
- ಈಶಾನ್ಯ ರಾಜ್ಯಗಳಲ್ಲಿ ಇಂಡಿಯಾ ಪೋಸ್ಟ್ ಪೇಮೆಂಟ್ಸ್ ಬ್ಯಾಂಕ್‌ನ 100 ಕ್ಕೂ ಹೆಚ್ಚು ಶಾಖೆಗಳನ್ನು ಸ್ಥಾಪನೆ
- ದೇಶದ ಸರ್ವಾಂಗೀಣ ಅಭಿವೃದ್ಧಿಗಾಗಿ ಸರ್ಕಾರ ರಾಷ್ಟ್ರೀಯ ಸಹಕಾರ ನೀತಿ
- ಗ್ರಾಮೀಣಾಭಿವೃದ್ಧಿಗೆ 2.66 ಲಕ್ಷ ಕೋಟಿ ರೂ.
- ಆಂಧ್ರಪ್ರದೇಶಕ್ಕೆ 15,000 ಕೋಟಿ ರೂಪಾಯಿ ಆರ್ಥಿಕ ನೆರವು ನೀಡಲಾಗುವುದು.
- ಸರ್ಕಾರವು ಪ್ರತಿ ವರ್ಷ ಒಂದು ಲಕ್ಷ ವಿದ್ಯಾರ್ಥಿಗಳಿಗೆ ನೇರವಾಗಿ ಇ-ವೋಚರ್‌ಗಳನ್ನು ನೀಡಲಿದ್ದು, ಇದರಲ್ಲಿ ಸಾಲದ ಮೊತ್ತದ ಮೇಲೆ ಶೇಕಡಾ ಮೂರರಷ್ಟು ಬಡ್ಡಿ ಸಬ್ಸಿಡಿ
- ಉದ್ಯೋಗಕ್ಕೆ ಸಂಬಂಧಿಸಿದ ಮೂರು ಯೋಜನೆಗಳನ್ನು ಸರ್ಕಾರ ಆರಂಭ
- ಪೂರ್ವ ಪ್ರದೇಶದಲ್ಲಿ ಕೈಗಾರಿಕಾ ಕಾರಿಡಾರ್ ನಿರ್ಮಿಸುವ ಪ್ರಸ್ತಾವನೆ.
- ಅಮೃತಸರ-ಕೋಲ್ಕತ್ತಾ ಕೈಗಾರಿಕಾ ಕಾರಿಡಾರ್‌ನಲ್ಲಿ ಬಿಹಾರದ ಗಯಾದಲ್ಲಿ ಕೈಗಾರಿಕಾ ಅಭಿವೃದ್ಧಿಯನ್ನು ನಾವು ಬೆಂಬಲಿಸುತ್ತೇವೆ. ಇದು ಪೂರ್ವ ಭಾಗದ ಅಭಿವೃದ್ಧಿಗೆ ಉತ್ತೇಜನ
- 26,000 ಕೋಟಿ ವೆಚ್ಚದಲ್ಲಿ ರಸ್ತೆ ಸಂಪರ್ಕ ಯೋಜನೆಗಳಾದ ಪಾಟ್ನಾ-ಪೂರ್ಣಿಯಾ ಎಕ್ಸ್‌ಪ್ರೆಸ್‌ವೇ, ಬಕ್ಸರ್-ಭಾಗಲ್ಪುರ್ ಹೆದ್ದಾರಿ, ಬೋಧಗಯಾ-ರಾಜ್‌ಗೀರ್-ವೈಶಾಲಿ-ದರ್ಭಾಂಗ ಮತ್ತು ಬಕ್ಸಾರ್‌ನಲ್ಲಿ ಗಂಗಾ ನದಿಯ ಮೇಲೆ ಹೆಚ್ಚುವರಿ ದ್ವಿಪಥ ಸೇತುವೆಯ ಅಭಿವೃದ್ಧಿಗೆ ನಾವು ಬೆಂಬಲ
- ಎಲ್ಲಾ ಔಪಚಾರಿಕ ವಲಯಗಳಲ್ಲಿ ಕೆಲಸ ಮಾಡಲು ಬರುವ ಎಲ್ಲಾ ಹೊಸ ಜನರಿಗೆ ಒಂದು ತಿಂಗಳ ವೇತನ ಇಪಿಎಫ್‌ಒದಲ್ಲಿ ನೋಂದಾಯಿಸಿದ ಮೊದಲ ಬಾರಿಯ ಉದ್ಯೋಗಿಗಳಿಗೆ 3 ಕಂತುಗಳಲ್ಲಿ ನೇರ ನಗದು ವರ್ಗಾವಣೆ ಅಡಿಯಲ್ಲಿ ಒಂದು ತಿಂಗಳ ಸಂಬಳ ರೂ 15,000 ವರೆಗೆ ನೀಡುವಿಕೆ
- ಹವಾಮಾನ ಸ್ನೇಹಿ ಬೀಜಗಳನ್ನು ಅಭಿವೃದ್ಧಿಪಡಿಸಲು ಸರ್ಕಾರವು ಖಾಸಗಿ ವಲಯ, ತಜ್ಞರು ಮತ್ತು ಇತರರಿಗೆ ಹಣವನ್ನು ಒದಗಿಸುವಿಕೆ
- ಉದ್ಯೋಗ ಮಾರುಕಟ್ಟೆಗೆ ಪ್ರವೇಶಿಸುವ 30 ಲಕ್ಷ ಯುವಕರಿಗೆ ಸರ್ಕಾರ ಒಂದು ತಿಂಗಳ ಪಿಎಫ್ ಕೊಡುಗೆ ನೀಡುವ ಮೂಲಕ ಪ್ರೋತ್ಸಾಹ
- ಸರಕಾರ ಸೀಗಡಿ ಸಾಕಾಣಿಕೆ ಮತ್ತು ಮಾರುಕಟ್ಟೆಗೆ ಹಣಕಾಸು ಒದಗಿಸುವಿಕೆ
- ತರಕಾರಿ ಉತ್ಪಾದನೆ ಮತ್ತು ಪೂರೈಕೆ ಸರಪಳಿಗಾಗಿ ಹೆಚ್ಚಿನ ಎಫ್‌ಪಿಒಗಳನ್ನು ರಚಿಸಲಾಗುವುದು, ಕೃಷಿ ಭೂಮಿ ಮತ್ತು ರೈತರ ದಾಖಲೆಗಳನ್ನು ಡಿಜಿಟಲ್ ಮಾಡಲು ಒತ್ತು