ಪೆರ್ಡೂರು: ಪಿಯುಸಿ ವಿದ್ಯಾರ್ಥಿನಿ ಆತ್ಮಹತ್ಯೆ

Oplus_131072

ಪೆರ್ಡೂರು: ಪಿಯುಸಿ ವಿದ್ಯಾರ್ಥಿನಿಯೊರ್ವಳು ಮನೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.

ನಯನ(17) ಎಂಬಾಕೆ ಪೆರ್ಡೂರು ಸರ್ಕಾರಿ ಪದವಿ ಪೂರ್ವ ಕಾಲೇಜಿನ ದ್ವಿತೀಯ ಪಿಯುಸಿ ವಿದ್ಯಾರ್ಥಿನಿ ನೇಣಿಗೆ ಶರಣಾಗಿದ್ದ ಬಗ್ಗೆ ದೂರು ದಾಖಲಾಗಿದೆ.

ಜುಲೈ 22 ರಂದು ಬೆಳಿಗ್ಗೆ ಯಾವುದೋ ತನ್ನ ವೈಯುಕ್ತಿಕ ಕಾರಣದಿಂದ ಅಥವಾ ಇನ್ನಾವುದೋ ಕಾರಣದಿಂದ ಮಾನಸಿಕವಾಗಿ ನೊಂದು ಜೀವನದಲ್ಲಿ ಜಿಗುಪ್ಸೆಗೊಂಡು ಮನೆಯ ಉಪ್ಪರಿಗೆ ಮಾಡಿನ ಜಂತಿಗೆ ಚೂಡಿದಾರ ಶಾಲನ್ನು ಬಿಗಿದು ಕಟ್ಟಿ ಕುತ್ತಿಗೆಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡು ಮೃತಪಟ್ಟಿರುವುದಾಗಿದೆ. ಈ ಬಗ್ಗೆ ಹಿರಿಯಡ್ಕ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ.

Leave a Reply

Your email address will not be published. Required fields are marked *

error: Content is protected !!