ಉಡುಪಿ: ಪ್ರಯಾಣಿಕರ ಸುರಕ್ಷತೆಗೆ ಜಿಲ್ಲಾಡಳಿತದಿಂದ ಸಲಹೆ-ಸೂಚನೆ

ಉಡುಪಿ: ಸಾರ್ವಜನಿಕರು ಮತ್ತು ಶಾಲಾ ವಿದ್ಯಾರ್ಥಿಗಳು ಸಂಚರಿಸುವ ಖಾಸಗಿ ಬಸ್ ಮತ್ತು ಶಾಲಾ ವಾಹನಗಳಲ್ಲಿ ಅಸನ ಸಾಮರ್ಥ್ಯಕ್ಕಿಂತ ಹೆಚ್ಚಿನ ಸಂಖ್ಯೆಯಲ್ಲಿ ವಿದ್ಯಾರ್ಥಿಗಳು/ಪ್ರಯಾಣಿಕರು ಸಂಚರಿಸುತ್ತಿರುವುದು ಹಾಗೂ ನಿಗದಿತ ವೇಗದ ಮಿತಿಗಿಂತ ಹೆಚ್ಚಿನ ವೇಗದಲ್ಲಿ ವಾಹನಗಳನ್ನು ಚಲಾಯಿಸುತ್ತಿರುವುದು ಕಂಡುಬಂದಿದ್ದು, ಇದರಿಂದಾಗಿ ಅಪಘಾತ ಸಂಭವಿಸುವ ಸಾಧ್ಯತೆಗಳಿರುತ್ತವೆ.

ಈ ಹಿನ್ನೆಲೆಯಲ್ಲಿ ಬಸ್‌ಗಳಲ್ಲಿ ಸಂಚರಿಸುವ ವಿದ್ಯಾರ್ಥಿಗಳ ಮತ್ತು ಪ್ರಯಾಣಿಕರ ಸುರಕ್ಷತೆಯನ್ನು ಕಾಪಾಡುವ ನಿಟ್ಟಿನಲ್ಲಿ ಖಾಸಗಿ ಬಸ್ ಮಾಲಕರು ಹಾಗೂ ಶಾಲಾ ವಾಹನಗಳನ್ನು ಹೊಂದಿರುವ ಶಾಲಾ ಮುಖ್ಯಸ್ಥರು ಈ ಕೆಳಕಂಡ ಸಲಹೆ-ಸೂಚನೆಗಳನ್ನು ಪಾಲಿಸುವಂತೆ ಜಿಲ್ಲಾಧಿಕಾರಿ ಡಾ.ಕೆ.ವಿದ್ಯಾಕುಮಾರಿ ಸೂಚಿಸಿದ್ದಾರೆ.

ಸಂಚರಿಸುವ ಬಸ್‌ಗಳು ಫಿಟ್‌ನೆಸ್ ಪ್ರಮಾಣಪತ್ರ ಮತ್ತು ವಿಮಾ ಪ್ರಮಾಣ ಪತ್ರವನ್ನು ಹೊಂದಿರಬೇಕು ಮತ್ತು ಅನುಮತಿ ಸುವ ಮಿತಿಯನ್ನು ಮೀರಿ ಹೊಗೆಯನ್ನು ಹೊರಸೂಸಬಾರದು. ನೊಂದಾಯಿತ ಆಸನ ಸಾಮರ್ಥ್ಯದ ನಿಗದಿತ ಸಂಖ್ಯೆಗಿಂತ ಹೆಚ್ಚು ವಿದ್ಯಾರ್ಥಿಗಳು ಮತ್ತು ಪ್ರಯಾಣಿಕರು ಸಂಚರಿಸುವಂತಿಲ್ಲ. ನಿಗದಿತ ವೇಗದ ಮಿತಿಗಿಂತ ಹೆಚ್ಚಿನ ವೇಗದಲ್ಲಿ ಬಸ್‌ ಗಳನ್ನು ಚಲಾಯಿಸುವಂತಿಲ್ಲ. ವೇಗದ ಮಿತಿಯನ್ನು ಅನುಸರಿಸಬೇಕು. ಚಾಲನಾ ಅನುಭವ ಇರುವ ಬಸ್ ಚಾಲಕರನ್ನೇ ನಿಯೋಜಿಸ ಬೇಕು ಹಾಗೂ ರಸ್ತೆ ಸುರಕ್ಷತಾ ನಿಯಮಗಳನ್ನು ಕಡ್ಡಾಯವಾಗಿ ಪಾಲಿಸುವಂತೆ ಪ್ರಕಟಣೆ ತಿಳಿಸಿದೆ.

Leave a Reply

Your email address will not be published. Required fields are marked *

error: Content is protected !!