ಪರಶುರಾಮ ಥೀಮ್ ಪಾರ್ಕ್ ಹಗರಣ: ನಿರ್ಮಿತಿ ಕೇಂದ್ರದ ಯೋಜನಾ ನಿರ್ದೇಶಕ ಅರುಣ್ ಕುಮಾರ್ ಅಮಾನತು

Oplus_131072

ಕಾರ್ಕಳ: ರಾಜ್ಯಾದ್ಯಂತ ಭಾರೀ ಸುದ್ದಿಯಾಗಿರುವ, ಹಿಂದುತ್ವದ ಭಾವನೆಗಳಿಗೆ ದಕ್ಕೆಯಾದ ಯರ್ಲಪಾಡಿ ಗ್ರಾಮದ ಉಮಿಕಲ್ ಬೆಟ್ಟದಲ್ಲಿ ನಿರ್ಮಿಸಿರುವ ಪರಶುರಾಮ ಥೀಮ್ ಪಾರ್ಕ್ ಕಾಮಗಾರಿಯನ್ನು ಪೂರ್ಣಗೊಳಿಸದೇ ಸಂಬಂಧಪಟ್ಟ ಇಲಾಖೆಗೆ ಹಸ್ತಾಂತರ ಮಾಡದೇ ಇರುವುದರಿಂದ ಉಡುಪಿ ನಿರ್ಮಿತಿ ಕೇಂದ್ರದ ಯೋಜನಾ ನಿರ್ದೇಶಕ ಅರುಣ್ ಕುಮಾರ್‌ರನ್ನು ಜಿಲ್ಲಾಧಿಕಾರಿಯವರು ಅಮಾನತು ಮಾಡಿ ಆದೇಶಿಸಿದ್ದಾರೆ.

ಪರಶುರಾಮ ಕಾಮಗಾರಿಗೆ ಅಂದಾಜು ಮೊತ್ತ 11.5 ಕೋಟಿಗೆ ಆಡಳಿತಾತ್ಮಕವಾಗಿ ಮಂಜೂರುಗೊಂಡಿದ್ದು ಈ ಪೈಕಿ ರೂ. 6.72ಕೋಟಿ ಬಿಡುಗಡೆಯಾಗಿತ್ತು. ಈ ಕಾಮಗಾರಿಯನ್ನು ಪೂರ್ಣಗೊಳಿಸದೇ ಸಂಬಂಧಪಟ್ಟ ಇಲಾಖೆಗೆ ಹಸ್ತಾಂತರ ಮಾಡದೇ ಉದ್ಘಾಟನಾ ಕಾರ್ಯಕ್ರಮ ಮಾಡಿರುವುದರಿಂದ ನಿರ್ಮಾಣದ ಗುಣಮಟ್ಟ ಹಾಗೂ ಧಾರ್ಮಿಕ ಭಾವನೆಗಳಿಗೆ ಅಪಚಾರವಾಗುತ್ತಿರುವ ಬಗ್ಗೆ ಪರ-ವಿರೋಧ ಚರ್ಚೆಗಳು ವಿವಿಧ ಪತ್ರಿಕೆ, ಮಾಧ್ಯಮಗಳಲ್ಲಿ ವರದಿಯಾಗುತ್ತಿದೆ.

ಈ ಕಾಮಗಾರಿಯ ಬಗ್ಗೆ ಪೊಲೀಸ್ ಇಲಾಖೆ ಮತ್ತು ಗೌರವಾನ್ವಿತ ನ್ಯಾಯಮೂರ್ತಿ ಹೆಚ್. ಎನ್. ನಾಗಮೋಹನ್‌ದಾಸ್ ವಿಚರಣಾ ಆಯೋಗದಲ್ಲಿ ತನಿಖಾ ಹಂತದಲ್ಲಿದ್ದು ಹಾಗೂ ಉಚ್ಛ ನ್ಯಾಯಾಲಯದಲ್ಲಿ ಪ್ರಕರಣ ದಾಖಲಾಗಿರುತ್ತದೆ.

ತನಿಖೆಗೆ ಅಡ್ಡಿ ಉಂಟುಮಾಡುವ ಅಥವಾ ತನಿಖೆ ಹಸ್ತಕ್ಷೇಪ ಮಾಡುವ ಸಾಧ್ಯತೆಗಳಿರುವುದರಿಂದ ಅರುಣ್ ಕುಮಾರ್‌ರನ್ನು ಕರ್ತವ್ಯದಿಂದ ಅಮಾನತು ಮಾಡಿ ಆದೇಶ ಹೊರಡಿಸಲಾಗಿದೆ.

Leave a Reply

Your email address will not be published. Required fields are marked *

error: Content is protected !!