ಉಡುಪಿ: ಬಡಗಬೆಟ್ಟು ಸೊಸೈಟಿಯ ನಿವೃತ್ತ ಅಧಿಕಾರಿಗಳಿಗೆ ಬೀಳ್ಕೊಡುಗೆ

Oplus_131072

ಉಡುಪಿ: ಬಡಗಬೆಟ್ಟು ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿ ಯಲ್ಲಿ ಹಲವು ವರ್ಷಗಳ ಕಾಲ ಸೇವೆ ಸಲ್ಲಿಸಿ ನಿವೃತ್ತಿ ಹೊಂದಿದ ಶಾಖಾ ವ್ಯವಸ್ಥಾಪಕರಾದ ನಯನಾ ಆಶಾಮಣಿ, ದಾಮೋದರ್, ಶೆರ್ಲಿನ್ ಕರ್ಕಡ ಹಾಗೂ ಸಿಬ್ಬಂದಿ ರವಿ ಬಿ. ಅವರ ಬೀಳ್ಕೊಡುಗೆ ಕಾರ್ಯಕ್ರಮವು ಉಡುಪಿ ಅಜ್ಜರಕಾಡು ಪುರಭವನ ಮಿನಿಹಾಲ್‌ನಲ್ಲಿ ಇತ್ತೀಚೆಗೆ ಜರಗಿತು.

ಕುಂದಾಪುರ ಉಪವಿಬಾಗದ ಸಹಕಾರ ಸಂಘಗಳ ಸಹಾಯಕ ನಿಬಂಧಕಿ ಸುಕನ್ಯಾ, ನಿವೃತ್ತ ಸಹಕಾರ ಸಂಘಗಳ ಸಹಾಯಕ ನಿಬಂಧಕ ಅರುಣ್ ಕುಮಾರ್ ಎಸ್.ವಿ. ಸಮ್ಮುಖದಲ್ಲಿ ಇವರನ್ನು ಸನ್ಮಾನಿಸಲಾಯಿತು.

ಈ ಸಂದರ್ದಲ್ಲಿ ಸಂಘದ ಅಧ್ಯಕ್ಷ ಜಯಕರ ಶೆಟ್ಟಿ ಇಂದ್ರಾಳಿ, ಉಪಾಧ್ಯಕ್ಷ ಜಾರ್ಜ್ ಸಾಮ್ಯುವೆಲ್, ಆಡಳಿತ ಮಂಡಳಿ ಸದಸ್ಯರಾದ ಎಲ್.ಉಮಾನಾಥ, ಪುರುಷೋತ್ತಮ ಪಿ.ಶೆಟ್ಟಿ, ಸೈಯ್ಯದ್ ಅಬ್ದುಲ್ ರಜಾಕ್, ವಿನಯ ಕುಮಾರ್ ಟಿ.ಎ., ಮನೋಹರ ಎಸ್.ಶೆಟ್ಟಿ, ಸಾಧು ಸಾಲ್ಯಾನ್, ಸದಾಶಿವ ನಾಯ್ಕ್, ಜಯಾ ಶೆಟ್ಟಿ, ಗಾಯತ್ರಿ ಎಸ್.ಭಟ್, ಪ್ರಧಾನ ವ್ಯವಸ್ಥಾಪಕ ರಾಜೇಶ್ ವಿ. ಶೇರಿಗಾರ್, ಸಹಾಯಕ ಪ್ರಧಾನ ವ್ಯವಸ್ಥಾಪಕ ಪ್ರವೀಣ್ ಕುಮಾರ್ ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

error: Content is protected !!