ಭಾರಿ ಮಳೆ ಗಾಳಿ: ಹೆಬ್ರಿ ತಾಲೂಕಿನ ಶಾಲಾ ಕಾಲೇಜುಗಳಿಗೆ ಜು.26 (ಇಂದು) ರಜೆ ಘೋಷಣೆ

Oplus_131072

ಉಡುಪಿ: ಹೆಬ್ರಿ ತಾಲೂಕು ವ್ಯಾಪ್ತಿಯಲ್ಲಿ ಹೆಚ್ಚಿನ ಗಾಳಿ ಮಳೆಯಾಗುತ್ತಿರುವ ಹಿನ್ನೆಲೆ ಮುಂಜಾಗ್ರತಾ ಕ್ರಮವಾಗಿ ಹೆಬ್ರಿ ತಾಲೂಕಿನ ಅಂಗನವಾಡಿ, ಪ್ರಾಥಮಿಕ ಪಾಠಶಾಲೆ, ಪ್ರೌಢಶಾಲೆ ಹಾಗೂ ಪದವಿ ಪೂರ್ವ ಕಾಲೇಜುಗಳಿಗೆ ಜು.26 ರಂದು ರಜೆಯನ್ನು ಘೋಷಿಸಿ ಹೆಬ್ರಿ ತಾಲ್ಲೂಕಿನ ತಹಶೀಲ್ದಾರ್ ಆದೇಶ ನೀಡಿದ್ದಾರೆ.

ಹೆಬ್ರಿ ತಾಲೂಕಿನ ಅಂಗನವಾಡಿ, ಪ್ರಾಥಮಿಕ, ಪ್ರೌಢಶಾಲೆ, ಪದವಿ ಪೂರ್ವ ಕಾಲೇಜುಗಳ ವಿದ್ಯಾರ್ಥಿಗಳಿಗೆ ಜು.26ರ ಶುಕ್ರವಾರ ರಜೆ ಘೋಷಿಸಲಾಗಿದೆ.

ಉಳಿದಂತೆ ಎಲ್ಲಾ ಪದವಿ, ಸ್ನಾತಕೊತ್ತರ ಪದವಿ, ಡಿಪ್ಲೋಮ, ಇಂಜಿನಿಯರಿಂಗ್‌ ಐ.ಟಿ.ಐ. ವಿದ್ಯಾರ್ಥಿಗಳಿಗೆ ಎಂದಿನಂತೆ ತರಗತಿಗಳು ನಡೆಯಲಿವೆ ಎಂದು ಹೆಬ್ರಿ ತಹಶೀಲ್ದಾರ್‌ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!