ಒಲಿಂಪಿಕ್ಸ್: ಏರ್ ಪಿಸ್ತೂಲ್‌ನಲ್ಲಿ ಭಾರತದ ಮೊದಲ ಪದಕ ಬಾಚಿದ ಶೂಟರ್ ಮನು ಭಾಕರ್!
ಪ್ಯಾರಿಸ್: ಒಲಿಂಪಿಕ್ಸ್ 2024ರ ಕ್ರೀಡಾಕೂಟದಲ್ಲಿ ಭಾರತಕ್ಕೆ ಮೊದಲ ಪದಕ ಬಂದಿದ್ದು ಭಾರತದ ಶೂಟರ್ ಮನು ಭಾಕರ್ ಕಂಚಿನ ಪದಕ ಗೆಲ್ಲುವಲ್ಲಿ ಸಫಲವಾಗಿದ್ದಾರೆ.
ಒಲಿಂಪಿಕ್ಸ್ 2024ರ ಕ್ರೀಡಾಕೂಟದಲ್ಲಿ ಭಾರತಕ್ಕೆ ಮೊದಲ ಪದಕ ಬಂದಿದ್ದು ಭಾರತದ ಶೂಟರ್ ಮನು ಭಾಕರ್ ಕಂಚಿನ ಪದಕಕ್ಕೆ ಮುತ್ತಿಟ್ಟಿದ್ದಾರೆ.
ಫ್ರಾನ್ಸ್ ನಲ್ಲಿ ಶನಿವಾರದಿಂದ ಆರಂಭವಾಗಿರುವ ಪ್ಯಾರಿಸ್ ಒಲಿಂಪಿಕ್ಸ್ ಕ್ರೀಡಾಕೂಟದ ಮೊದಲ ದಿನವೇ ಶೂಟಿಂಗ್ ನಲ್ಲಿ ಭಾರತಕ್ಕೆ ಸಿಹಿ ಸುದ್ದಿ ಸಿಕ್ಕಿದ್ದು, ಶೂಟರ್ ಮನು ಭಾಕರ್ ಅವರು ಮಹಿಳೆಯರ 10 ಮೀಟರ್ ಏರ್ ಪಿಸ್ತೂಲ್ ಸ್ಪರ್ಧೆಯಲ್ಲಿ ಫೈನಲ್ ತಲುಪಿದ್ದಾರೆ. ಈ ಮೂಲಕ ಪದಕದ ನಿರೀಕ್ಷೆ ಮೂಡಿಸಿದ್ದರು.
22 ವರ್ಷದ ಮನು ಭಾಕರ್ ಅವರು ಅರ್ಹತಾ ಸ್ಪರ್ಧೆಯಲ್ಲಿ 600 ಅಂಕಗಳಿಗೆ 580 ಅಂಕಗಳನ್ನು ಗಳಿಸಿದ್ದು, ಪಟ್ಟಿಯಲ್ಲಿ ಮೂರನೇ ಸ್ಥಾನ ಪಡೆಯುವುದರೊಂದಿಗೆ ಫೈನಲ್ಗೆ ಲಗ್ಗೆ ಇಟ್ಟಿದ್ದರು.
ಒಟ್ಟು 45 ಅಥ್ಲೀಟ್‌ಗಳು ಭಾಗವಹಿಸಿದ್ದ ಅರ್ಹತಾ ಸುತ್ತಿನಲ್ಲಿ 580 ಅಂಕಗಳನ್ನು ಗಳಿಸಿದ ಮನು ಮೂರನೇ ಸ್ಥಾನ ಗಳಿಸಿದರೆ, ಅದೇ ಸ್ಪರ್ಧೆಯಲ್ಲಿ ಭಾಗವಹಿಸಿದ್ದ ಭಾರತದ ಇನ್ನೋರ್ವ ಶೂಟರ್ ರಿದಮ್ ಸಾಂಗ್ವಾನ್ ಅವರು 15ನೇ ಸ್ಥಾನ ಪಡೆದು ಫೈನಲ್ಗೆ ಅರ್ಹತೆ ಪಡೆಯುವಲ್ಲಿ ವಿಫಲರಾಗಿದ್ದರು.