ಮುಡಾ ಹಗರಣ ವಿರೋಧಿಸಿ ಆ.10 ರಂದು ಬಿಜೆಪಿ ಪಾದಯಾತ್ರೆ
ಬೆಂಗಳೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ) ಅಕ್ರಮ ನಿವೇಶನ ಹಂಚಿಕೆ ಹಗರಣಕ್ಕೆ ಸಂಬಂಧಿಸಿದಂತೆ ಆಗಸ್ಟ್ 3ರಿಂದ ಬೆಂಗಳೂರಿನಿಂದ ಪಾದಯಾತ್ರೆ ಆರಂಭಿಸುತ್ತೇವೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಹೇಳಿದ್ದಾರೆ.
ಬೆಂಗಳೂರಿನ ಖಾಸಗಿ ಹೋಟೆಲ್ನಲ್ಲಿ ನಡೆದ ಬಿಜೆಪಿ, ಜೆಡಿಎಸ್ ನಾಯಕರ ಸಭೆ ಬಳಿಕ ಮಾತನಾಡಿದ ವಿಜಯೇಂದ್ರ, ಬೆಂಗಳೂರಿನಿಂದ ಮೈಸೂರಿನವರೆಗೆ ಪಾದಯಾತ್ರೆ ನಡೆಸುತ್ತೇವೆ. ಮೈಸೂರಿನಲ್ಲಿ ಆಗಸ್ಟ್ 10 ರಂದು ಪಾದಯಾತ್ರೆ ಸಮಾರೋಪ ಸಮಾರಂಭ ಮಾಡಲಾಗುವುದು ಎಂದು ತಿಳಿಸಿದ್ದಾರೆ.
ಸಭೆಯಲ್ಲಿ ಕೇಂದ್ರ ಸಚಿವರಾದ ಹೆಚ್ ಡಿ ಕುಮಾರಸ್ವಾಮಿ, ಪ್ರಹ್ಲಾದ್ ಜೋಶಿ, ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಭಾಗವಹಿಸಿದ್ದರು.
ಉಭಯ ಪಕ್ಷಗಳ ಮುಖಂಡರು ಮತ್ತು ಪದಾಧಿಕಾರಿಗಳು ‘ಭ್ರಷ್ಟ ಸಿಎಂ – ಭ್ರಷ್ಟ ಕಾಂಗ್ರೆಸ್” ಘೋಷಣೆಯೊಂದಿಗೆ ಮೆರವಣಿಗೆ ನಡೆಸಲಿದ್ದಾರೆ.