ಲೋಕಸಭಾ ಚುನಾವಣಾ ಸೋಲಿನ ಪರಾಮರ್ಶೆಗೆ ವಿ.ಎಸ್ ಉಗ್ರಪ್ಪ ನೇತೃತ್ವದ ಸತ್ಯಶೋದನಾ ಸಮಿತಿ ನಾಳೆ ಉಡುಪಿಗೆ

ಉಡುಪಿ: ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಸೋಲಿನ ಪರಾಮರ್ಶೆ ನಡೆಸಲು ಕೆಪಿಸಿಸಿ ಉಪಾಧ್ಯಕ್ಷ ವಿ.ಎಸ್ ಉಗ್ರಪ್ಪ ನೇತೃತ್ವದ ಸತ್ಯಶೋದನಾ ಸಮಿತಿ ನಾಳೆ (ಜು.30) ಉಡುಪಿ ಜಿಲ್ಲಾ ಕಾಂಗ್ರೆಸ್ ಕಚೇರಿಗೆ ಭೇಟಿ ನೀಡಲಿದೆ.

ವಿ.ಎಸ್ ಉಗ್ರಪ್ಪ ನೇತೃತ್ವದಲ್ಲಿ ದ.ಕ, ಉಡುಪಿ, ಚಿಕ್ಕಮಗಳೂರು, ಉತ್ತರ ಕನ್ನಡ, ಶಿವಮೊಗ್ಗ ಜಿಲ್ಲೆ ಸೇರಿದಂತೆ ಕರಾವಳಿ ವಿಭಾಗದಲ್ಲಿ ಕಾಂಗ್ರೆಸ್ ಸೋಲಿನ ವರದಿ ಪಡೆಯಲು ಕೆಪಿಸಿಸಿ ನೇಮಿಸಿರುವ ಸತ್ಯಶೋಧನಾ ಸಮಿತಿ ಉಡುಪಿ ಬ್ರಹ್ಮಗಿರಿಯಲ್ಲಿರುವ ಕಾಂಗ್ರೆಸ್ ಜಿಲ್ಲಾ ಕಚೇರಿಯಲ್ಲಿ ಜು.30 ರಂದು ಬೆಳಿಗ್ಗೆ 10 ರಿಂದ ರಾತ್ರಿ 7 ಗಂಟೆಯವರೆಗೆ ಪರಾಮರ್ಶೆ ನಡೆಸಲಿದೆ.

ಸತತ ಎರಡು ವಿಧಾನ ಸಭಾ ಚುನಾವಣೆಯಲ್ಲಿ ಐದು ಕ್ಷೇತ್ರದಲ್ಲಿ ಯಾವುದೇ ಅಭ್ಯರ್ಥಿಯನ್ನು ಗೆಲ್ಲಿಸಿಕೊಡುವಲ್ಲಿ ವಿಫಲವಾಗಿರುವ ಕಾಂಗ್ರೆಸ್ ಮುಖಂಡರು, ಕಳೆದ ಲೋಕಸಭಾ ಚುನಾವಣೆಯಲ್ಲಿ ಕಳಪೆ ಪ್ರದರ್ಶನ ನೀಡಿರುವ ಬಗ್ಗೆ ಹೈಕಮಾಂಡ್ ಗಂಭೀರವಾಗಿ ಪರಿಗಣಿಸಿದೆ.

ಕಾಂಗ್ರೆಸ್‌ನ ನಿಷ್ಠಾವಂತ ಕಾರ್ಯಕರ್ತರು ಜಿಲ್ಲೆಯ ಮುಖಂಡ ಬಗ್ಗೆ ಬಹಳ ಅಸಮಾಧಾನವಿದ್ದು, ನಾಳೆ ಆಗಮಿಸಲಿರುವ ಸಮಿತಿ ಮುಂದೆ ತಮ್ಮ ಅಳಲು ತೊಡಿಕೊಳ್ಳಲಿದ್ದಾರೆ.

ಇದೆ ಮೊದಲ ಬಾರಿ ಪಕ್ಷದ ಸೋಲಿನ ಕಾರಣಗಳನ್ನು ಸವಿಸ್ತಾರವಾಗಿ ಸಮಿತಿಯ ಮುಂದೆ ಇಡುವ ಅವಕಾಶ ಕಾರ್ಯಕರ್ತರಿಗೆ ಅವಕಾಶ ನೀಡಲಾಗಿದೆ.

Leave a Reply

Your email address will not be published. Required fields are marked *

error: Content is protected !!