ಮಂಗಳೂರು –ಬೆಂಗಳುರು ರಾ.ಹೆದ್ದಾರಿ ಭೂಕುಸಿತ ವಾಹನ ಸಂಚಾರ ಸ್ಥಗಿತ

ಹಾಸನ ; ರಾಜ್ಯದಲ್ಲಿ ಸುರಿಯುವ ಭಾರೀ ಮಳೆಗೆ ಅಲ್ಲಲ್ಲಿ ಗುಡ್ಡಗಾಡುಗಳು ಕುಸಿಯುತ್ತಿವೆ. ಶಿರಾಡಿ ಘಾಟ್​ನ ರಾಷ್ಟ್ರೀಯ ಹೆದ್ದಾರಿ 75ರಲ್ಲಿ ಸಂಚಾರ ಸ್ಥಗಿತವಾಗಿದೆ. ಇದೀಗ ಜಿಲ್ಲೆಯ ಸಕಲೇಶಪುರ ತಾಲೂಕಿನ ಎತ್ತಿನಹಳ್ಳದ ಬಳಿ ಏಕಾಏಕಿ ಗುಡ್ಡ ಕುಸಿದಿದ್ದು, ಮತ್ತೆ ಗಂಟೆಗಟ್ಟಲೆ ಕಿಲೋಮೀಟರ್​ ತನಕ ವಾಹನಗಳು ಸಾಲುಗಟ್ಟಿ ನಿಂತಿದೆ.

ಸಕಲೇಶಪುರ ತಾಲೂಕಿನ ದೊಡ್ಡತಪ್ಲು ಬಳಿಯ ಶಿರಾಡಿಘಾಟ್ ರಾಷ್ಟ್ರೀಯ ಹೆದ್ದಾರಿ 75ರಲ್ಲಿ ಇಂದು ಚಲಿಸುತ್ತಿದ್ದ ಕಾರು ,ಲಾರಿ,ಗ್ಯಾಸ್ ಟ್ಯಾಂಕರ್ ಮೇಲೆ ಗುಡ್ಡ ಕುಸಿದಿದ್ದು ಹೆಚ್ಚಿನ ಮಾಹಿತಿ ಇನ್ನೂ ಲಭ್ಯವಾಗಬೇಕಿದೆ.ಆದರೆ ಇಂದು ಮತ್ತೊಮ್ಮೆ ಗುಡ್ಡ ಕುಸಿತದಿಂದ ಶಿರಾಡಿಘಾಟ್​ನಲ್ಲಿ ವಾಹನ ಸಂಚಾರ ಸ್ಥಗಿತಗೊಳಿಸಲಾಗಿತ್ತು. ಗಂಟೆಗಟ್ಟಲೆ ಸಾಲು ನಿಂತ ವಾಹನಳಿಂದ ರೋಡ್ ಬ್ಲಾಕ್ ಆಗಿದೆ. ಇನ್ನು ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಅಧಿಕಾರಿಗಳು ದೌಡಹಿಸಿದ್ದು ಮಣ್ಣು ತೆರವು ಮಾಡುವ ಕಾರ್ಯಾಚರಣೆ ಪ್ರಾರಂಭವಾಗಿದ್ದು ಸುಮಾರು ಆರು ಗಂಟೆಗಳ ಕಾಲ ಸಂಚಾರ ಬಂದ್ ಮಾಡಲಾಗಿದೆ ,ಅದರಂತೆ ಪುತ್ತೂರು ಸಂಪಾಜೆ ರಸ್ತೆಯಲ್ಲಿ ಗುಡ್ಡ ಕುಸಿತ ಉಂಟಾಗಿದ್ದು ತೆರವು ಕಾರ್ಯಚರಣೆ ಹಿನ್ನೆಲೆ ಮೂರು ಗಂಟೆಗಳ ಕಾಲ ಸಂಚಾರ ನಿಷೇಧಿಸಲಾಗಿದೆ.

Leave a Reply

Your email address will not be published. Required fields are marked *

error: Content is protected !!