ಉಡುಪಿ ಜಿಲ್ಲಾಸ್ಪತ್ರೆಯ ನೂತನ ಕಟ್ಟಡಕ್ಕೆ ದಿ. ಆಸ್ಕರ್ ಫೆರ್ನಾಂಡೀಸ್ ಹೆಸರಿಡಲು ಮನವಿ
ಉಡುಪಿ ಜಿಲ್ಲಾ ಆಸ್ಪತ್ರೆಯ ಬಳಿ ನೂತನವಾಗಿ ನಿರ್ಮಾಣವಾಗುತ್ತಿರುವ 250 ಹಾಸಿಗೆಗಳ ಸುಸಜ್ಜಿತವಾದ ಆಸ್ಪತ್ರೆಗೆ ಉಡುಪಿ ಹಾಗೂ ದಕ್ಷಿಣ ಕನ್ನಡ ಜಿಲ್ಲೆಗೆ ಹಲವಾರು ಕೊಡುಗೆಯನ್ನು ಕೊಟ್ಟು ಹಾಗೂ ರಾಜ್ಯ ಹಾಗೂ ದೇಶಕ್ಕೆ ಮಾದರಿಯ ರಾಜಕೀಯ ಧುರೀಣರಾಗಿದ್ದ ಮಾಜಿ ಕೇಂದ್ರ ಸಚಿವರಾಗಿದ್ದ ದಿ. ಆಸ್ಕರ್ ಫರ್ನಾ೦ಡೀಸ್ ರವರ ಹೆಸರನ್ನುಈ ನೂತನ ಸರಕಾರಿ ಜಿಲ್ಲಾ ಆಸ್ಪತ್ರೆಗೆ ನಾಮನಿರ್ದೇಶನ ಮಾಡಲು ಕಾಂಗ್ರೆಸ್ ಮುಖಂಡರು ಮುನಿಯಾಲ್ ಉದಯಕುಮಾರ್ ಶೆಟ್ಟಿ ಅವರ ನೇತೃತ್ವದಲ್ಲಿ ಸಮಾಜ ಸೇವಕರು ಕಾಂಗ್ರೆಸ್ ಮುಖಂಡರಾದ ಕೆ.ಕೃಷ್ಣಮೂರ್ತಿ ಆಚಾರ್ಯರವರು ಆರೋಗ್ಯ ಸಚಿವರಾದ ದಿನೇಶ್ ಗುಂಡೂರಾವ್, ಮುಖ್ಯಮಂತ್ರಿಯವರಾದ ಸಿದ್ಧರಾಮಯ್ಯ, ಉಪಮುಖ್ಯಮಂತ್ರಿಯವರಾದ ಡಿ ಕೆ ಶಿವಕುಮಾರ್, ಮಾನ್ಯ ವಿಧಾನ ಸಭಾ ಸಭಾಧ್ಯಕ್ಷರಾದ ಯು. ಟಿ ಖಾದರ್, ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರಾದ ಲಕ್ಷ್ಮೀ ಹೆಬ್ಬಾಳ್ಕರ್, ವಿಧಾನ ಪರಿಷತ್ತ್ ಶಾಸಕರಾದ ಮಂಜುನಾಥ್ ಭಂಡಾರಿ,ವಿಧಾನ ಪರಿಷತ್ತ್ ಸದಸ್ಯರಾದ ಐವನ್ ಡಿಸೋಜರವರಿಗೆ ಮನವಿ ಮಾಡಿದರು.