ಯಾದಗಿರಿ ಪಿಎಸ್ಐ ಅನುಮಾನಸ್ಪದ ಸಾವು: ಶಾಸಕ ಚೆನ್ನಾರೆಡ್ಡಿ ಹಾಗೂ ಪುತ್ರನ ವಿರುದ್ಧ ಎಫ್ಐಆರ್
ಯಾದಗಿರಿ: ಇಲ್ಲಿನ ನಗರ ಠಾಣೆಯಲ್ಲಿ ಪಿಎಸ್ಐ ಆಗಿ ಕರ್ತವ್ಯ ನಿರ್ವಹಿಸ್ತಿದ್ದ ಪರಶುರಾಮ ಶುಕ್ರವಾರ ಹಠಾತ್ ಹೃದಯಾಘಾತದಿಂದ ನಿಧನರಾಗಿದ್ದಾರೆ.
ಪಿಎಸ್ಐ ಪರಶುರಾಮ ಸಾವಿನ ಸುತ್ತ ಅನುಮಾನಗಳು ಶುರುವಾಗಿದ್ದು, ಯಾದಗಿರಿ ನಗರದ ವಿವಿಧ ಸಂಘಟನೆಗಳು ಪ್ರತಿಭಟನೆ ನಡೆಸಿವೆ.
ಪೋಸ್ಟಿಂಗ್ ಗಾಗಿ ಸ್ಥಳೀಯ ಶಾಸಕ ಚೆನ್ನಾರೆಡ್ಡಿ ಪಾಟೀಲ್ ತುನ್ನೂರ್ ಹಣಕ್ಕೆ ಬೇಡಿಕೆ ಇಟ್ಟಿದ್ದು, ಇದರಿಂದ ಪರಶುರಾಮ್ ಸಾಲದ ಸುಳಿಗೆ ಸಿಲುಕಿದ್ದರು ಎಂದು ಕುಟುಂಬಸ್ಥರು ಆರೋಪಿಸಿದ್ದಾರೆ.
ಯಾದಗಿರಿ ನಗರ ಠಾಣೆಗೆ ಪೋಸ್ಟಿಂಗ್ಗಾಗಿ ಕಾಂಗ್ರೆಸ್ ಶಾಸಕ ಚೆನ್ನಾರೆಡ್ಡಿ ಪಾಟೀಲ್ 30 ಲಕ್ಷ ರೂ. ಹಣಕ್ಕೆ ಬೇಡಿಕೆ ಇಟ್ಟಿದ್ದರು. ಹೀಗಾಗಿ ಪರಶುರಾಮ 30 ಲಕ್ಷ ರೂ. ನೀಡಿ, ಯಾದಗಿರಿ ನಗರಕ್ಕೆ ವರ್ಗಾವಣೆಯಾಗಿ ದ್ದರು. ಆದರೆ, ಒಂದು ವರ್ಷದ ಪೂರೈಸುವ ಮುನ್ನವೇ ಪರಶುರಾಮ್ ಅವರನ್ನು ಮತ್ತೆ ಯಾದಗಿರಿ ಸೈಬರ್ ಕ್ರೈಮ್ ಠಾಣೆಗೆ ವರ್ಗಾವಣೆ ಮಾಡಲಾಗಿದೆ. ಇದರಿಂದ ಒತ್ತಡಕ್ಕೆ ಒಳಗಾಗಿದ್ದ ಪಿಎಸ್ಐ ಪರಶುರಾಮ ಸಾಲದ ಸುಳಿಗೆ ಸಿಲುಕಿದ್ದರು ಎನ್ನಲಾಗಿದೆ.
ಯಾದಗರಿ ಶಾಸಕ ಚೆನ್ನಾರೆಡ್ಡಿಹಾಗೂ ಪುತ್ರನ ವಿರುದ್ಧ ಎಫ್ಐಆರ್ ಪಿಎಸ್ಐ ಸಾವಿನಲ್ಲಿ ಶಾಸಕ ಚೆನ್ನಾರೆಡ್ಡಿ ಪಾಟೀಲ ಹಾಗೂ ಅವರ ಪುತ್ರ ಸನ್ನಿರೆಡ್ಡಿ ಪಾಟೀಲ ಕೈವಾಡ ಇರುವುದಾಗಿ ಮೃತ ಪಿಎಸ್ಐ ಪತ್ನಿ ದೂರು ನೀಡಿರುವ ಹಿನ್ನಲೆಯಲ್ಲಿ ಶಾಸಕ ಹಾಗೂ ಪುತ್ರ ಸನ್ನಿರೆಡ್ಡಿ ವಿರುದ್ಧ ಯಾದಗಿರಿ ನಗರ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.