ಅಮಾವಾಸ್ಯೆ ದಿನ ಉಡುಪಿಯಲ್ಲಿ ವಿಚಿತ್ರ ಘಟನೆ- ಪತ್ನಿಯ ಕುತ್ತಿಗೆ ಕಡಿದು, ನರ್ತಿಸಿದ ಪತಿ!
ಕುಂದಾಪುರ: ಇಲ್ಲಿನ ಬಸ್ರೂರಿನಲ್ಲಿ ಭೀಮನ ಅಮಾವಾಸ್ಯೆ ದಿನ ಉಡುಪಿಯಲ್ಲಿ ವಿಚಿತ್ರ ಘಟನೆ ನಡೆದಿದೆ.
ಕುಡಿದ ಮತ್ತಿನಲ್ಲಿದ್ದ ಪತಿ ಪತ್ನಿಯ ಕುತ್ತಿಗೆ ಕಡಿದು ಮಾರಣಾಂತಿಕ ಗಾಯಗೊಳಿಸಿದ್ದ ಕೃತ್ಯ ಬಸ್ರೂರು ಕಾಶಿ ಮಠ, ರೆಸಿಡೆನ್ಶಿಯಲ್ ಬ್ಲಾಕ್ ನ ಬಾಡಿಗೆ ಮನೆಯಲ್ಲಿ ಈ ವಿಚಿತ್ರ ಘಟನೆ ನಡೆದಿದೆ. ಅನಿತಾ (38) ಗಂಡನಿಂದ ಮಾರಣಾಂತಿಕವಾಗಿ ಹಲ್ಲೆಗೊಳಗಾದವರು.
ಘಟನೆಯ ವಿವರ: ಸೊರಬ ತಾಲೂಕು ಮೂಲದ ಲಕ್ಷ್ಮಣ ಮತ್ತು ಅನಿತಾ ದಂಪತಿಗಳು ಕಾಶಿಮಠದ ತೋಟ ನೋಡಿಕೊಳ್ಳುತ್ತಿದ್ದವರು. ನಾಲ್ಕು ತಿಂಗಳ ಹಿಂದಯಷ್ಟೆ ತೋಟ ನೋಡಿಕೊಳ್ಳಲು ಉಡುಪಿ ಜಿಲ್ಲೆಗೆ ಬಂದಿದ್ದರು ಎನ್ನಲಾಗಿದೆ.
ನಿನ್ನೆ ರಾತ್ರಿ ಕುಡಿದ ಮತ್ತಿನಲ್ಲಿದ್ದ ಪತಿ ಲಕ್ಷ್ಮಣ ಪತ್ನಿಯ ಕುತ್ತಿಗೆ ಕಡಿದು ಮಾರಣಾಂತಿಕ ಗಾಯಗೊಳಿಸಿದ್ದ.
ಮನೆಯ ಅಡುಗೆ ಕೋಣೆಯಲ್ಲಿ ರಕ್ತದ ಮಡುವಿನಲ್ಲಿ ಬಿದ್ದಿದ್ದ ಅನಿತಾ ಅವರು, ಮನೆಯ ಬಾಗಿಲ ಚಿಲಕ ಹಾಕಿ ಹಾಲ್ ನಲ್ಲಿ ಕೈಯಲ್ಲಿ ಕತ್ತಿ ಹಿಡಿದು ನರ್ತಿಸುತ್ತಿದ್ದ ಪತಿ ಲಕ್ಷ್ಮಣ ಘಟನೆ ಅರಿವೇ ಬರುತ್ತಲೇ ಕಿಟಕಿ ಒಡೆದು ಅಡುಗೆ ಕೋಣೆಗೆ ತೆರಳಿ ಪತ್ನಿಯನ್ನು ಹೊರತಂದಿದ್ದಾರೆ ಸ್ಥಳೀಯರು.
ಚಿಂತಾಜನಕ ಸ್ಥಿತಿಯಲ್ಲಿದ್ದಾಕೆಯನ್ನು ಸ್ಥಳೀಯರು ಮಣಿಪಾಲ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದಾರೆ.
ಇಷ್ಟಾದರೂ ಮೈಮೇಲೆ ದೈವ ಬಂದವರಂತೆ ಕೈಯಲ್ಲಿ ಕತ್ತಿ ಹಿಡಿದು ನರ್ತಿಸುತ್ತಿದ್ದ ಪತಿಯನ್ನು ಪೊಲೀಸರು ಮತ್ತು ಅಗ್ನಿಶಾಮಕ ಸಿಬ್ಬಂದಿಗಳು ಒಂದೂವರೆ ಗಂಟೆಯ ಬಳಿಕ ಹರಸಾಹಸ ಆರೋಪಿ ಸೆರೆ ಹಿಡಿದರು. ಕಂಡ್ಲೂರು ಪೊಲೀಸ್ ಠಾಣೆಯಲ್ಲಿ ಈ ಕುರಿತು ಪ್ರಕರಣ ದಾಖಲಾಗಿದೆ.