ಕಲ್ಮಾಡಿ ವೆಲಂಕಣಿ ಮಾತೆಯ ವಾರ್ಷಿಕ ಮಹೋತ್ಸವ

ಉಡುಪಿ: ಕಲ್ಮಾಡಿಯಲ್ಲಿರುವ ಸ್ಟೆಲ್ಲಾ ಮಾರಿಸ್ ದೇವಾಲಯದ ವೆಲಂಕಣಿ ಮಾತೆಯ ಪುಣ್ಯಕ್ಷೇತ್ರದ ವಾರ್ಷಿಕ ಮಹೋತ್ಸ ವವು ಆ.15ರಂದು ನಡೆಯಲಿದೆ. ಕೇಂದ್ರವನ್ನು 2022ರ ಆ.15ರಂದು ಉಡುಪಿ ಧರ್ಮಪ್ರಾಂತದ ಧರ್ಮಾಧ್ಯಕ್ಷರಾದ ಅತೀ ವಂ.ಡಾ. ಜೆರಾಲ್ಡ್ ಐಸಾಕ್ ಲೋಬೊ ಅವರು ಧರ್ಮಪ್ರಾಂತ್ಯದ ಅಧಿಕೃತ ಪುಣ್ಯಕ್ಷೇತ್ರವಾಗಿ ಘೋಷಿಸಿದ್ದರು.

ಪ್ರತಿ ವರ್ಷದಂತೆ ಈ ಬಾರಿ ಕೂಡ ವೆಲಂಕಣಿ ಮಾತೆಯ ಪುಣ್ಯಕ್ಷೇತ್ರದ ವಾರ್ಷಿಕ ಮಹೋತ್ಸವಕ್ಕೆ ಪೂರ್ವಭಾವಿಯಾಗಿ ಒಂಭತ್ತು ದಿನಗಳ ನವೇನಾ ಪ್ರಾರ್ಥನೆಗಳು ಆ.6ರಿಂದ 14ರ ಸಂಜೆ 4 ಗಂಟೆವರೆಗೆ ನಡೆಯಲಿದೆ.

ಆ.6ರ ಮಂಗಳವಾರ ಸಂಜೆ ೩:೪೫ಕ್ಕೆ ಮಂಗಳೂರು ಧರ್ಮಪ್ರಾಂತದ ಶ್ರೇಷ್ಟ ಗುರುಗಳಾದ ಮೊನ್ಸಿ. ಲಾರೆನ್ಸ್ ಮ್ಯಾಕ್ಸಿಮ್ ನೊರೋನ್ಹಾ ಪುಣ್ಯಕ್ಷೇತ್ರದ ಬಾವುಟವನ್ನು ಹಾರಿಸುವ ಮೂಲಕ ನವೇನಾ ಪ್ರಾರ್ಥನೆಗಳಿಗೆ ಚಾಲನೆ ನೀಡಲಿರುವರು.

ಆ.11ರ ರವಿವಾರ ಅಪರಾಹ್ನ 2.30ಕ್ಕೆ ಕಲ್ಮಾಡಿ ಸೇತುವೆಯಿಂದ ಕಲ್ಮಾಡಿ ದೇವಾಲಯದವರೆಗೆ ವೆಲಂಕಣಿ ಮಾತೆಯ ಮೂರ್ತಿಯ ಮೆರವಣಿಗೆ ನಡೆಯಲಿದೆ. ಅಂದು ಮಂಗಳೂರು ಧರ್ಮಪ್ರಾಂತದ ನಿವೃತ್ತ ಧರ್ಮಾಧ್ಯಕ್ಷರಾದ ಅತೀ ವಂ. ಡಾ.ಲುವಿಸ್ ಪಾವ್ಲ್ ಡಿಸೋಜಾ ಅವರು ವೆಲಂಕಣಿ ಮಾತೆ ಮೂರ್ತಿಯ ಮೆರವಣಿಗೆಗೆ ಚಾಲನೆ ನೀಡುವರು.

ಆ.15 ರ ಗುರುವಾರ ಬೆಳಗ್ಗೆ 10:30ಕ್ಕೆ ದಿವ್ಯ ಬಲಿಪೂಜೆಯನ್ನು ಉಡುಪಿ ಧರ್ಮಪ್ರಾಂತದ ಧರ್ಮಾಧ್ಯಕ್ಷರಾದ ಅತೀ ವಂ. ಡಾ.ಜೆರಾಲ್ಡ್ ಐಸಾಕ್ ಲೋಬೊ ನೆರೆವೇರಿಸುವರು. ಉಡುಪಿ ಧರ್ಮಪ್ರಾಂತದ ಅನೇಕ ಧರ್ಮ ಗುರುಗಳು ಹಾಗೂ ಸಾವಿರಾರು ಭಕ್ತಾದಿಗಳು ಈ ಧಾರ್ಮಿಕ ಕಾರ್ಯಕ್ರಮ ದಲ್ಲಿ ಪಾಲ್ಗೊಳ್ಳುವರು. ಅಂದು ಬೆಳಗ್ಗೆ 7.30 ಹಾಗೂ ಸಂಜೆ 4ಕ್ಕೆ ಕೊಂಕಣಿ ಭಾಷೆಯಲ್ಲಿ ಹಾಗೂ 6 ಗಂಟೆಗೆ ಇಂಗ್ಲೀಷ್ ಭಾಷೆಯಲ್ಲಿ ಇತರೆ ಬಲಿಪೂಜೆಗಳನ್ನು ಆಯೋಜಿಸಲಾಗಿದೆ ಎಂದು ಚರ್ಚ್‌ನ ಪ್ರಕಟಣೆ ತಿಳಿಸಿದೆ.

Leave a Reply

Your email address will not be published. Required fields are marked *

error: Content is protected !!