ಗೃಹಲಕ್ಷ್ಮಿ ಯೋಜನೆ: ಬಾಕಿ ಕಂತು ಇಂದಿನಿಂದಲೇ ಗೃಹಿಣಿಯರ ಖಾತೆಗೆ ಜಮಾ- ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್

ಮಂಡ್ಯ : ಗೃಹಲಕ್ಷ್ಮಿ ಯೋಜನೆಯ ಎರಡು ತಿಂಗಳ ಬಾಕಿ ಕಂತು ಇಂದಿನಿಂದಲೇ ಗೃಹಿಣಿಯರ ಖಾತೆಗೆ ಜಮಾ ಆಗಲಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ತಿಳಿಸಿದ್ದಾರೆ.

ನಗರದಲ್ಲಿ ಮಂಗಳವಾರ ನಡೆದ ಕಾಂಗ್ರೆಸ್ ಪಕ್ಷದ ಜನಾಂದೋಲನ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ತಾಂತ್ರಿಕ ಕಾರಣದಿಂದ ಜೂನ್​ ಮತ್ತು ಜುಲೈ ಎರಡು ತಿಂಗಳ ಹಣ ಜಮೆ ಆಗಿರಲಿಲ್ಲ. ಇವತ್ತಿನಿಂದ ಹಣ ಖಾತೆಗೆ ಜಮೆ ಆಗಲಿದೆ ಎಂದರು.

ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್​ ಸರಕಾರ ಜಾರಿಗೆ ತಂದಿರುವ ಪಂಚ ಗ್ಯಾರಂಟಿ ಯೋಜನೆಗಳ ಪೈಕಿ ಗೃಹಲಕ್ಷ್ಮಿ ಯೋಜನೆಯೂ ಒಂದು. ಕಾಂಗ್ರೆಸ್ ಸರಕಾರ ಯಾವತ್ತೂ ನುಡಿದಂತೆ ನಡೆಯುವ ಸರಕಾರ. ಜನರಿಗೆ ನೀಡಲಾಗಿರುವ ಗ್ಯಾರಂಟಿ ಯೋಜನೆಗಳು ಯಾವುದೇ ಕಾರಣಕ್ಕೂ ನಿಲ್ಲುವುದಿಲ್ಲ. ಕೆಲವು ತಾಂತ್ರಿಕ ಕಾರಣದಿಂದ ಎರಡು ತಿಂಗಳ ಹಣ ಬಿಡುಗಡೆ ಆಗಿರಲಿಲ್ಲ. ಮಹಿಳೆಯರು ಇನ್ನು ಮುಂದೆ ಆತಂಕಪಡುವ ಅಗತ್ಯ ಇಲ್ಲ ಎಂದು ಅವರು ಸ್ಪಷ್ಟಪಡಿಸಿದರು.

1 thought on “ಗೃಹಲಕ್ಷ್ಮಿ ಯೋಜನೆ: ಬಾಕಿ ಕಂತು ಇಂದಿನಿಂದಲೇ ಗೃಹಿಣಿಯರ ಖಾತೆಗೆ ಜಮಾ- ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್

  1. Yavaga haktiri innu badavr adrne nambkond idare ivattu nale ankonta yak nambstira akolla andre akolla anteli don’t play with people trust

Leave a Reply

Your email address will not be published. Required fields are marked *

error: Content is protected !!