ಪೆಟ್ರೋಲ್, ಡಿಸೇಲ್, ಗ್ಯಾಸ್ ಬೆಲೆ ಏರಿಕೆ ಆಯಿತು, ಜನತೆಗೆ ಈಗ ಕರೆಂಟ್ ಶಾಕ್: ದರ ಏರಿಕೆ ಮಾಡಿದ ರಾಜ್ಯ ಸರ್ಕಾರ
ಬೆಂಗಳೂರು: ಉಪ ಚುನಾವಣೆ ಮುಗಿಯುತ್ತಿದ್ದಂತೆ ಬಿಎಸ್ ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರ್ಕಾರ ರಾಜ್ಯದ ಜನತೆಗೆ ಕರೆಂಟ್ ಶಾಕ್ ನೀಡಿದ್ದು, ವಿದ್ಯುತ್ ದರ ಹೆಚ್ಚಳ ಮಾಡಿ ಬುಧವಾರ ಆದೇಶ ಹೊರಡಿಸಿದೆ.
ವಿದ್ಯುತ್ ಸರಬರಾಜು ಕಂಪೆನಿಗಳ ಪ್ರಸ್ತಾವನೆ ಮೇರೆಗೆ ಕರ್ನಾಟಕ ವಿದ್ಯುತ್ ನಿಯಂತ್ರಣ ಆಯೋಗ ವಿದ್ಯುತ್ ದರ ಹೆಚ್ಚಳ ಮಾಡಿದ್ದು, ಪ್ರತಿ ಯೂನಿಟ್‍ಗೆ 40 ಪೈಸೆ ಹೆಚ್ಚಿಸಿದ್ದು, ನವೆಂಬರ್ 1 ರಿಂದಲೇ ಪರಿಷ್ಕೃತ ದರ ಪೂರ್ವಾನ್ವಯವಾಗಿ ಜಾರಿಗೆ ಬರಲಿದೆ.
ಕಳೆದ ಮಾರ್ಚ್ ನಿಂದಲೇ ದರ ಹೆಚ್ಚಳವಾಗಬೇಕಿತ್ತು. ಆದರೆ ಕೊರೋನಾ ಮತ್ತು ಆರ್ ಆರ್ ನಗರ, ಶಿರಾ ಉಪ ಚುನಾವಣೆ ಕಾರಣದಿಂದ ತಡೆಹಿಡಿಯಲಾಗಿದ್ದ ದರ ಹೆಚ್ಚಳ ಪ್ರಸ್ತಾವಕ್ಕೆ ಸರ್ಕಾರ ಇಂದು ಒಪ್ಪಿಗೆ ಸೂಚಿಸಿದೆ.
ಬೆಸ್ಕಾಂ ವ್ಯಾಪ್ತಿಯಲ್ಲಿ 40 ಪೈಸೆ ಹೆಚ್ಚಳ ಮಾಡಿ ಕರ್ನಾಟಕ ವಿದ್ಯುಚ್ಛಕ್ತಿ ನಿಯಂತ್ರಣ ಆಯೋಗದಿಂದ ಆದೇಶ ಹೊರಡಿಸಲಾಗಿದೆ