ಕುಂದಾಪುರ: ಬಸ್ಸಿಗೆ ಲಾರಿ ಢಿಕ್ಕಿ- 11 ವಿದ್ಯಾರ್ಥಿಗಳ ಸಹಿತ ಹಲವರಿಗೆ ಗಾಯ

ಕುಂದಾಪುರ : ಪ್ರಯಾಣಿಕರನ್ನು ಇಳಿಸಲು ರಸ್ತೆ ಬದಿ ನಿಲ್ಲಿಸಿದ್ದ ಖಾಸಗಿ ಬಸ್ಸಿಗೆ ಲಾರಿಯೊಂದು ಹಿಂದಿನಿಂದ ಢಿಕ್ಕಿ ಹೊಡೆದ ಪರಿಣಾಮ ವಿದ್ಯಾರ್ಥಿಗಳು ಸೇರಿದಂತೆ ಹಲವರು ಗಾಯಗೊಂಡ ಘಟನೆ ರಾಷ್ಟ್ರೀಯ ಹೆದ್ದಾರಿ 66 ರ ತಲ್ಲೂರಿನ ಪ್ರವಾಸಿ ಹೋಟೆಲ್ ಬಳಿ ಶನಿವಾರ ಬೆಳಗ್ಗೆ ಸಂಭವಿಸಿದೆ.

ಬೈಂದೂರಿನಿಂದ ಕುಂದಾಪುರದೆಡೆ ತೆರಳುತ್ತಿದ್ದ ಖಾಸಗಿ ಬಸ್ ಪ್ರಯಾಣಿಕರನ್ನು ಇಳಿಸಲು ನಿಲ್ಲಿಸಿದ್ದು ಈ ವೇಳೆ ಹಿಂದಿನಿಂದ ಬಂದ ಲಾರಿ ಢಿಕ್ಕಿ ಹೊಡೆದಿದೆ. ಢಿಕ್ಕಿಯ ರಭಸಕ್ಕೆ ಬಸ್ ಹಿಂಬದಿ ಸಂಪೂರ್ಣ ನಜ್ಜುಗುಜ್ಜಾಗಿದ್ದು ಬಸ್ ಒಳಗಿದ್ದ 11 ಕಾಲೇಜು ವಿದ್ಯಾರ್ಥಿಗಳೂ ಸೇರಿದಂತೆ ಕೆಲವು ಪ್ರಯಾಣಿಕರಿಗೆ ಗಾಯಗಳಾಗಿವೆ. ಓರ್ವ ವಿದ್ಯಾರ್ಥಿಯ ಕಾಲಿಗೆ ಗಂಭೀರಗಾಯವಾಗಿದ್ದು, ಹೆಚ್ಚಿನ ಚಿಕಿತ್ಸೆಗೆ ಮಣಿಪಾಲ ಆಸ್ಪತ್ರೆಗೆ ದಾಖಲಿಸಲಾಗಿ ದೆ. ಹಲವರು ಸಣ್ಣಪುಟ್ಟ ಗಾಯಗಳೊಂದಿಗೆ ಕುಂದಾಪುರದ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ.

Leave a Reply

Your email address will not be published. Required fields are marked *

error: Content is protected !!