ಬಿಜೆಪಿ-ಜೆಡಿಎಸ್ ಪಾದಯಾತ್ರೆ ಮುಕ್ತಾಯ – ಸಿದ್ದರಾಮಯ್ಯ ತಲೆದಂಡಕ್ಕೆ ದೋಸ್ತಿ ಪಣ
ಮೈಸೂರು: ಮುಡಾ ಹಾಗೂ ವಾಲ್ಮೀಕಿ ನಿಗಮ ಹಗರಣವನ್ನೇ ಅಸ್ತ್ರವನ್ನಾಗಿಸಿಕೊಂಡು ಮುಖ್ಯಮಂತ್ರಿ ಸಿದ್ದರಾಮಯ್ಯ ಪದತ್ಯಾಗಕ್ಕೆ ಆಗ್ರಹಿಸಿ 8 ದಿನಗಳ ಕಾಲ ಬಿಜೆಪಿ-ಜೆಡಿಎಸ್ ನಡೆಸಿದ ಮೈಸೂರು ಚಲೋ ಪಾದಯಾತ್ರೆಯು ಬೃಹತ್ ಸಮಾವೇಶದೊಂದಿಗೆ ಶನಿವಾರ ತೆರೆಬಿದ್ದಿದ್ದು, ಮುಖ್ಯಮಂತ್ರಿಗಳು ರಾಜೀನಾಮೆ ನೀಡುವವರೆಗೆ ಹೋರಾಟ ಮುಂದುವರೆಸುವುದಾಗಿ ಎರಡೂ ಪಕ್ಷಗಳು ಶಪಥ ಮಾಡಿವೆ.
ಶನಿವಾರ ಸಿದ್ದರಾಮಯ್ಯ ಅವರ ತವರು ಮೈಸೂರಿನಲ್ಲಿ ಬೃಹತ್ ಸಮಾವೇಶದ ಮೂಲಕ ಘರ್ಜಿಸಿದ ಮಿತ್ರಪಕ್ಷಗಳ ಘಟಾನುಘಟಿ ನಾಯಕರು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡುವವರೆಗೆ ಹೋರಾಟ ಮುಂದುವರೆಸುವುದಾಗಿ ಕಾರ್ಯಕರ್ತರ ಸಮ್ಮುಖದಲ್ಲಿ ಶಪಥ ಮಾಡಿದರು.