ಬೈಂದೂರು ಶಾಸಕರಿಂದ ಜಿಲ್ಲಾಡಳಿತ ವಿರುದ್ಧ ದಿಢೀರ್ ಅಹೋರಾತ್ರಿ ಧರಣಿ

Oplus_131072

ಬೈಂದೂರು: ತಮ್ಮ ಸಾಂವಿಧಾನಿಕ ಹಕ್ಕುಗಳಿಗೆ ಚ್ಯುತಿ ತರುತ್ತಿದ್ದಾರೆ ಎಂದು ಆರೋಪಿಸಿ ಬೈಂದೂರು ಶಾಸಕ ಗುರುರಾಜ್ ಗಂಟಿಹೊಳೆ ಬೈಂದೂರು ತಾಲೂಕು ಆಡಳಿತ ಸೌಧದ ಮುಂಭಾಗದಲ್ಲಿ ಕಾರ್ಯಕರ್ತರೊಂ ದಿಗೆ ಇಂದು ದಿಢೀರ್ ಅಹೋರಾತ್ರಿ ಧರಣಿ ಆರಂಭಿಸಿದ್ದಾರೆ.

ಶಾಸಕ ಗುರುರಾಜ್ ಗಂಟಿಹೊಳೆ ವಿವಿಧ ಸಮಸ್ಯೆಗಳಿಗೆ ಸಂಬಂಧಿಸಿದಂತೆ ಕಾರ್ಯಕರ್ತ ಕಚೇರಿಯಲ್ಲಿ ಇಂದು ಅಧಿಕಾರಿ ಗಳ ಸಭೆ ನಿಗದಿಗೊಳಿಸಿದ್ದರು. ಆದರೆ ಈ ಸಭೆಗೆ ಅಧಿಕಾರಿಗಳು ಹೋಗದಂತೆ ಜಿಲ್ಲಾಧಿಕಾರಿಗಳು ಕರೆ ಮಾಡಿ ಸೂಚಿಸಿದ್ದು ಹೀಗಾಗಿ ಅಧಿಕಾರಿಗಳು ಸಭೆಗೆ ಹಾಜರಾಗಿರಲಿಲ್ಲ ಎಂದು ಆರೋಪಿಸಲಾಗಿದೆ. ಇದರಿಂದ ಶಾಸಕರು ಜಿಲ್ಲಾಡಳಿತದ ವಿರುದ್ದ ಅಹೋರಾತ್ರಿ ಧರಣಿಗೆ ಮುಂದಾಗಿದ್ದಾರೆ.

ಧರಣಿಯಲ್ಲಿ ಮಾತನಾಡಿರುವ ಶಾಸಕರು, ಜನ ಕರೆದಲ್ಲಿಗೆ ನಾನು ಹೋಗಬೇಕು. ನಾನು ಕರೆದಲ್ಲಿಗೆ ಜನರ ಅಹವಾಲು ಸ್ವೀಕರಿಸಲು ಅಧಿಕಾರಿಗಳು ಬರಬೇಕು. ಜನರ ಸೇವೆಗಾಗಿ ಅಧಿಕಾರಿಗಳು ಮತ್ತು ಜನಪ್ರತಿನಿಧಿಗಳು ಇರುವುದು. ಸರಕಾರ ನೀಡಿದ ಒಂದು ಕಚೇರಿಯಲ್ಲಿ ಕಾಲ ಮೇಲೆ ಕಾಲು ಹಾಕಿ ದರ್ಬಾರ್ ನಡೆಸುವ ವ್ಯಕ್ತಿ ನಾನಲ್ಲ. ತಾಲ್ಲೂಕಿನ ಜನತೆಯ ಉಪಯೋಗಕ್ಕಾಗಿ ಕ್ಷೇತ್ರದ ನಾಲ್ಕು ಭಾಗಗಳಲ್ಲಿ ಕಚೇರಿ ತೆರೆಯಲಾಗಿದೆ ಎಂದರು.

ಈ ಕಚೇರಿಗಳಲ್ಲಿ ನಡೆಯುವ ಸಭೆಗಳಿಗೆ ಅಧಿಕಾರಿಗಳು ಹೋಗದಂತೆ ಜಿಲ್ಲಾಧಿಕಾರಿಗಳು ಸೂಚನೆ ನೀಡುತ್ತಿರುವುದು ಏಕೆ? ಜಿಲ್ಲಾಧಿಕಾರಿಗಳಿಗೆ ರಾಜಕೀಯ ಒತ್ತಡವಿದ್ದರೆ ನೇರ ಹೇಳಲಿ. ಶಾಸಕನ ಹಕ್ಕು ಮೊಟಕು ಗೊಳಿಸುತ್ತಿರುವ ಆಡಳಿತ ಯಂತ್ರದ ವಿರುದ್ಧ ಅಹೋರಾತ್ರಿ ಧರಣಿಯ ಸಮರ ಸಾರಿದ್ದೇನೆ. ಸ್ಪಷ್ಟನೆ ಲಭ್ಯವಾಗುವವರೆಗೆ ವಿರಮಿಸುವ ಮಾತೇ ಇಲ್ಲ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!