ಯಶ್ಪಾಲ್ ಸುವರ್ಣ ಅಧ್ಯಕ್ಷತೆಯ ಮಹಾಲಕ್ಷ್ಮೀ ಕೋ ಆ. ಬ್ಯಾಂಕ್‍ಗೆ ಸತತ 8ನೇ ಬಾರಿಗೆ ಸಾಧನಾ ಪ್ರಶಸ್ತಿ

ಉಡುಪಿ: ಮಹಾಲಕ್ಷ್ಮೀ ಕೋ ಆಪರೇಟಿವ್ ಬ್ಯಾಂಕ್ ನಿ. ಉಡುಪಿ ಇದರ 2023-24ನೇ ಸಾಲಿನ ಸರ್ವತೋಮುಖ ಅಭಿವೃದ್ಧಿಗಾಗಿ ದ.ಕ. ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್‍ನಿಂದ ನೀಡಲ್ಪಡುವ ಸಾಧನಾ ಪ್ರಶಸ್ತಿ ಸತತ 8 ನೇ ಬಾರಿಗೆ ಲಭಿಸಿದೆ.

ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ ವಾರ್ಷಿಕ ಮಹಾಸಭೆಯಲ್ಲಿ ಡಾ| ಎಂ.ಎನ್.ರಾಜೇಂದ್ರ ಕುಮಾರ್ ರವರಿಂದ ಬ್ಯಾಂಕಿನ ಅಧ್ಯಕ್ಷರಾದ ಉಡುಪಿ ಶಾಸಕ ಯಶ್‍ಪಾಲ್ ಎ. ಸುವರ್ಣ ಹಾಗೂ ಉಪಾಧ್ಯಕ್ಷರಾದ ವಾಸುದೇವ ಸಾಲ್ಯಾನ್ ಪ್ರಶಸ್ತಿಯನ್ನು ಸ್ವೀಕರಿಸಿದರು. ಪ್ರಧಾನ ವ್ಯವಸ್ಥಾಪನಾ ನಿರ್ದೇಶಕರಾದ ಶರತ್ ಕುಮಾರ್ ಶೆಟ್ಟಿ ಎನ್. ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

error: Content is protected !!