ಉಡುಪಿ: ಜಮಾಅತೆ ಇಸ್ಲಾಮಿ ಹಿಂದ್- ಜಿಲ್ಲಾಸ್ಪತ್ರೆಯ ರೋಗಿಗಳಿಗೆ ಔಷಧಿ ಹಸ್ತಾಂತರ

Oplus_131072

ಉಡುಪಿ: ಜಿಲ್ಲಾಸ್ಪತ್ರೆಯ ಅರ್ಹ ರೋಗಿಗಳಿಗೆ ಜಮಾಅತೆ ಇಸ್ಲಾಮಿ ಹಿಂದ್ ವತಿಯಿಂದ ಲಕ್ಷಾಂತರ ರೂ. ಮೌಲ್ಯದ ಔಷಧಿ ಹಸ್ತಾಂತರ ಮಾಡಲಾಯಿತು.

ಈ ಸಂದರ್ಭದಲ್ಲಿ ಮಾತನಾಡಿದ ಜಿಲ್ಲಾ ಸರ್ಜನ್ ಡಾ.ಎಚ್.ಅಶೋಕ್, “ನಮ್ಮ ಬೇಡಿಕೆಗೆ ಸಂಘಟನೆ ಸ್ಪಂದಿಸಿ ಅಗತ್ಯವಿದ್ದ ಔಷಧಿ, ಕಂಪ್ಯೂಟರ್ ಸೇರಿದಂತೆ ಇನ್ನಿತರ ಅಗತ್ಯ ವಸ್ತುಗಳನ್ನು ಪೂರೈಸಿದ್ದಾರೆ. ಅವರ ಕಾರ್ಯ ಶ್ಲಾಘನೀಯವಾಗಿದ್ದು ಇದೇ ರೀತಿಯ ಸಹಕಾರ ಸದಾ ಇರಲಿ ಎಂದು ಆಶಯ ವ್ಯಕ್ತಪಡಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಇದ್ರೀಸ್ ಹೂಡೆ, ಸಂಘಟನೆಯು ಸದಾ ಕಾಲ ಸಂಕಷ್ಟದಲ್ಲಿರುವವರಿಗೆ ಮಿಡಿಯುವ ಕೆಲಸ ನಡೆಸುತ್ತ ಬಂದಿದೆ. ಕೋವಿಡ್ ಸಾಂಕ್ರಾಮಿಕದ ಸಂದರ್ಭದಲ್ಲಿ ರೇಷನ್ ಕಿಟ್ ವಿತರಣೆ, ಅಂತ್ಯ ಸಂಸ್ಕಾರ ಸೇರಿದಂತೆ ಸಾಧ್ಯವಾದ ಎಲ್ಲ ನೆರವನ್ನು ನಮ್ಮ ಕಾರ್ಯಕರ್ತರು ‌ಮಾಡಿದ್ದರು. ಕೇರಳದ ವಯನಾಡಿನಲ್ಲಿ ನಡೆದ ಭೂಕುಸಿತದ ಸಂದರ್ಭದಲ್ಲೂ ರಕ್ಷಣಾ ಕಾರ್ಯದಲ್ಲಿ ತೊಡಗಿಸಿ ಕೊಂಡಿದ್ದರು. ಇದೀಗ ಅರ್ಹ ರೋಗಿಗಳಿಗೆ ಬೇಕಾದ ಔಷಧವನ್ನು ಜಿಲ್ಲಾಸ್ಪತ್ರೆಗೆ ಒದಗಿಸುವ ಪ್ರಯತ್ನ ಮಾಡಿದ್ದೇವೆ ಎಂದು ಹೇಳಿದರು.

ಈ ಸಂದರ್ಭದಲ್ಲಿ ಅಝೀಝ್ ಉದ್ಯಾವರ, ಜಮಾಅತೆ ಇಸ್ಲಾಮಿ ಹಿಂದ್ ಉಡುಪಿ ಶಾಖೆಯ ಅಧ್ಯಕ್ಷ ನಿಸಾರ್ ಉಪ್ಪಿನಕೋಟೆ, ಡಾ.ನಿಖಿನ್ ಶೆಟ್ಟಿ, ಸಾಮಾಜಿಕ ಕಾರ್ಯಕರ್ತರಾದ ನಿತ್ಯಾನಂದ ಒಳಕಾಡು, ಅಝೀಝ್ ಉದ್ಯಾವರ, ಉದ್ಯಮಿ ಮುಹಮ್ಮದ್ ಸೀರಾಜ್, ಪ್ರೊ.ಅಬ್ದುಲ್ ಅಝೀಝ್ ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

error: Content is protected !!