ಕಾಪು: ಮದ್ರಾಸ್ ಐಐಟಿ ಪ್ರವರ್ತಕ ಅನ್ಲೈನ್ ವ್ಯಾಸಂಗ ಮತ್ತು ಸಮಾಲೋಚನೆ ಕೋರ್ಸ್ ಉದ್ಘಾಟನೆ
ಉಡುಪಿ: ಗುಣಮಟ್ಟದ ಶಿಕ್ಷಣಕ್ಕೆ ಹೆಚ್ಚಿನ ಒತ್ತು ನೀಡುತ್ತಿರುವ ಹೆಗ್ಗುಂಜೆ ರಾಜೀವ್ ಶೆಟ್ಟಿ ಚಾರಿಟೇಬಲ್ ಟ್ರಸ್ಟ್ ಉಡುಪಿ ಜಿಲ್ಲೆಯಲ್ಲಿ ಶಿಕ್ಷಣದ ಹೊಸ ಭಾಷ್ಯ ಬರೆಯಲು ಹೊರಟಿದ್ದಾರೆ. ಗ್ರಾಮೀಣ ಭಾಗದ ಸರಕಾರಿ ಶಾಲೆಯಲ್ಲಿ ಕಲಿಯುವ ಮಕ್ಕಳು ಕೂಡ ಐಐಟಿಯಂತ ಸಂಸ್ಥೆಯಲ್ಲಿ ಮುಂದುವರಿಯಬೇಕು ಎನ್ನುವ ಹಿನ್ನಲೆಯಲ್ಲಿ ಹೊಸ ಯೋಜನೆ ಪ್ರಾರಂಭಿಸಿದೆ.
ಮದ್ರಾಸ್ ಐಐಟಿ ಸಹಭಾಗಿತ್ವದಲ್ಲಿ ಸುಮಾರು 20 ಸರಕಾರಿ ಶಾಲೆಗಳಿಗೆ ಆನೈನ್ ತರಗತಿಯ ಜೊತೆಗೆ ಸಮಾಲೋಚನೆಯ ಕೋರ್ಸ್ ಪ್ರಾರಂಬಿಸಿದೆ, ಇದರ ಉದ್ಘಾಟನಾ ಕಾರ್ಯಕ್ರಮ ಇಂದು ನಡೆಯಿತು.
ಹೌದು, ಉಡುಪಿ ಜಿಲ್ಲೆ ರಾಜ್ಯದಲ್ಲಿಯೇ ಗುಣಮಟ್ಟದ ಶಿಕ್ಷಣಕ್ಕೆ ಹೆಸರುವಾಸಿಯಾದ ಜಿಲ್ಲೆ. ಗುಣಮಟ್ಟದ ಶಿಕ್ಷಣಕ್ಕೆ ಪೂರಕವಾಗಿ ಜಿಲ್ಲೆಯ ಹಲವು ಸಂಸ್ಥೆಗಳು ಸಹಕಾರ ನೀಡುತ್ತಾ ಬಂದಿದೆ. ಆದರೆ ಇತ್ತೀಚಿಗಿನ ದಿನಗಳಲ್ಲಿ ಹೆಗ್ಗುಂಜೆ ರಾಜೀವ ಶೆಟ್ಟಿ ಚಾರಿಟೇಬಲ್ ಟ್ರಸ್ಟ್ ಬೆಂಗಳೂರು ಶೈಕ್ಷಣಿಕ ಕ್ಷೇತ್ರದ ಜೊತೆಗೆ ಸಮಾಜದ ಎಲ್ಲಾ ರಂಗದಲ್ಲೂ ಕೊಡುಗೆ ನೀಡುತ್ತಾ ಬಂದಿದೆ. ಸದ್ಯ ಗುಣಮಟ್ಟದ ಶಿಕ್ಷಣಕ್ಕೆ ಇನ್ನಷ್ಟು ಬಲ ನೀಡುವ ನಿಟ್ಟಿನಲ್ಲಿ ಐಐಟಿ ಮದ್ರಾಸ್ ಪ್ರವರ್ತಕ ಸಹಭಾಗಿತ್ವದಲ್ಲಿ ಉಡುಪಿ ಜಿಲ್ಲೆಯ 20 ಶಾಲೆಗಳಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ವಿದ್ಯಾರ್ಥಿಗಳನ್ನು ಸಿದ್ಧಗೊಳಿಸುವ ನಿಟ್ಟಿನಲ್ಲಿ ತರಗತಿಗಳನ್ನು ನಡೆಸಿಕೊಡುವ ಯೋಜನೆ ಹೆಗ್ಗುಂಜೆ ರಾಜೀವ ಶೆಟ್ಟಿ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಆಯೋಜಿಸಲಾದ ಯೋಜನೆಗೆ ಚಾಲನೆ ನೀಡಲಾಯಿತು.
ಉಚ್ಚಿಲ ಮೊಗವೀರ ಭವನದಲ್ಲಿ 20 ವಿದ್ಯಾ ಸಂಸ್ಥೆಯಲ್ಲಿ ಉಡುಪಿ ಜಿಲ್ಲೆಯ ವಿವಿಧ ಸರಕಾರಿ ಹೈಸ್ಕೂಲ್ ಮತ್ತು ಪದವಿ ಪೂರ್ವ ಕಾಲೇಜುಗಳಲ್ಲಿ ಪ್ರಾಯೋಗಿಕವಾಗಿ ಪ್ರಾರಂಭವಾಗಲಿರುವ ಐ.ಐ.ಟಿ. ಮದ್ರಾಸ್ ಅವರ ಸಹಯೋಗದೊಂದಿಗೆ ಆನ್‌ಲೈನ್ ತರಬೇತಿ ಮತ್ತು ಕೌನ್ಸಿಲಿಂಗ್ ಕಾರ್ಯಕ್ರಮವನ್ನು ಐಐಟಿ ಪ್ರವರ್ತಕ ಮದ್ರಾಸ್ ಇದರ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ಎಂ.ಜೆ.ಶಂಕರಮಣ ಅವರು ಅನ್ಲೈನ್ ತರಗತಿಗೆ ಚಾಲನೆ ಮೂಲಕ ಕಾರ್ಯಕ್ರಮ ಉದ್ಘಾಟಿಸಿ ಶುಭ ಹಾರೈಸಿದರು.
ಕಾರ್ಯಕ್ರಮದಲ್ಲಿ ಪ್ರಸ್ತಾವಿಕವಾಗಿ ಮಾತನಾಡಿದ ಹೆಗ್ಗುಂಜೆ ರಾಜೀವ ಶೆಟ್ಟಿ ಚಾರಿಟೇಬಲ್ ಟ್ರಸ್ಟ್ ಅಧ್ಯಕ್ಷ , ಉದ್ಯಮಿ ಸಮಾಜ ಸೇವಕ ಡಾ.ಎಚ್ ಎಸ್ ಶೆಟ್ಟಿ ಮಾತನಾಡಿ, ನಮ್ಮ ಊರಿನ ಮಕ್ಕಳು ಕೂಡ ಮದ್ರಾಸ್ ಐಐಟಿಯಂತಹ ಸಂಸ್ಥೆಯಲ್ಲಿ ಶಿಕ್ಷಣ ಪಡೆಯುವ ಮಟ್ಟಿಗೆ ಬುದ್ಧಿವಂತರಾಗಬೇಕು. ಇಂದಿನ ಸ್ವರ್ಧಾತ್ಮಕ ಜಗತ್ತಿನಲ್ಲಿ ಹೊಸ ಹೊಸ ಬೆಳವಣಿಗೆಗಳು ಆಗುತ್ತಿದೆ. ನಮ್ಮ ಮಕ್ಕಳು ಈ ಪೈಪೋಟಿಯ ವ್ಯವಸ್ಥೆಯಲ್ಲಿ ಸಾಧಕರಾಗಬೇಕು. ಈ ತರಗತಿಗಳು ಆನ್ಲೈನ್ ಲೈವ್ ಮೂಲಕ ನಡೆಯಲಿದ್ದು ನಮ್ಮ ಜಿಲ್ಲೆಯ ವಿದ್ಯಾರ್ಥಿಗಳು ಐಐಟಿಯಂತಹ ಸಂಸ್ಥೆಗಳಲ್ಲಿ ಶಿಕ್ಷಣ ಪಡೆಯುವಂತಾಗಬೇಕು ಎನ್ನುವ ನಿಟ್ಟಿನಲ್ಲಿ ಈ ಯೋಜನೆ ಪ್ರಾರಂಭಿಸಿದ್ದೇನೆ ಎಂದರು.
ಒಟ್ಟಾರೆಯಾಗಿ, 2024-25ನೇ ಸಾಲಿನಲ್ಲಿ ಕರಾವಳಿಯ ಹಲವು ಜಿಲ್ಲೆಗಳಲ್ಲಿ ಐ.ಐ.ಟಿ. ಮದ್ರಾಸ್ ಅವರ ಸಹಯೋಗದೊಂದಿಗೆ ಆನ್‌ಲೈನ್ ತರಬೇತಿ ಮತ್ತು ಕೌನ್ಸಿಲಿಂಗ್ ಆಯೋಜಿಸಲಾಗಿದೆ. ಇನ್ನು ಉಡುಪಿ ಜಿಲ್ಲೆಯ ವಿವಿಧ ಸರಕಾರಿ ಹೈಸ್ಕೂಲ್ ಮತ್ತು ಪದವಿ ಪೂರ್ವ ಕಾಲೇಜುಗಳಲ್ಲಿ ಪ್ರಾಯೋಗಿಕವಾಗಿ ಪ್ರಾರಂಭಿಸಿ, ಇದನ್ನು ಕರಾವಳಿಯ ಎಲ್ಲಾ 150 ಹೈಸ್ಕೂಲ್ ಮತ್ತು ಪದವಿ ಪೂರ್ವ ಕಾಲೇಜುಗಳಿಗೆ ವಿಸ್ತರಿಸಿ ಎನ್ನುವುದು ನಮ್ಮ ಆಶಯ.
ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ಭಾಗವಹಿಸಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿ ಐ.ಐ.ಟಿ – ಮದ್ರಾಸ್ ಇವರಿಂದ ನೀಡುವ ಆನ್ ಲೈನ್ ವ್ಯಾಸಂಗ ಹಾಗೂ ಸಮಾಲೋಚನೆ ಕೋರ್ಸ್‌ಗಳ ಸದುಪಯೋಗವನ್ನು ವಿದ್ಯಾರ್ಥಿಗಳು ಪಡೆದುಕೊಳ್ಳಬೇಕು ಎಂದರು.
ಈ ಸಂದರ್ಭದಲ್ಲಿ ಹೆಗ್ಗುಂಜೆ ರಾಜೀವ ಶೆಟ್ಟಿ ಚಾರಿಟೇಬಲ್ ಟ್ರಸ್ಟ್ (ರಿ.) ಬೆಂಗಳೂರು ಅಧ್ಯಕ್ಷರಾದ ಡಾ. ಹೆಜ್.ಎಸ್ ಶೆಟ್ಟಿ, ಐ.ಐ.ಟಿ ಮದ್ರಾಸ್ ಪ್ರವರ್ತಕ ಟೆಕ್ನಾಲಜಿ ಚನೈ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ಎಂ.ಜೆ ಶಂಕರಮಣ, ಕುಂದಾಪುರ ವಿಧಾನಸಭಾ ಕ್ಷೇತ್ರದ ಶಾಸಕರಾದ ಕಿರಣ್ ಕುಮಾರ್ ಕೊಡ್ಗಿ, ಬೈಂದೂರು ವಿಧಾನಸಭಾ ಕ್ಷೇತ್ರದ ಶಾಸಕರಾದ ಗುರುರಾಜ್ ಗಂಟಿಹೊಳೆ, ಹೊಸ ಹೊಸದಿಗಂತ ಕನ್ನಡ ದೈನಿಕ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪಿ.ಎಸ್ ಪ್ರಕಾಶ್, ಶಾಲಾ ಸಾಕ್ಷರತಾ ಇಲಾಖೆಯ ಉಪ ನಿರ್ದೇಶಕರಾದ ಕೆ ಗಣಪತಿ, ಉಡುಪಿ ಜಿಲ್ಲಾ ಪದವಿ ಪೂರ್ವ ವಿಭಾಗದ ಉಪ ನಿರ್ದೇಶಕರಾದ ಮಾರುತಿ, ಐ.ಐ.ಟಿ ಮದ್ರಾಸ್ ಮುಖ್ಯ ನಿರ್ವಹಣಾಧಿಕಾರಿಗಳಾದ ಜಿ. ವೀರರಾಘವನ್ ಉಪಸ್ಥಿತರಿದ್ದರು.