ಉಡುಪಿ: ಕಾಡಬೆಟ್ಟು ಮಹಿಳೆ ನಾಪತ್ತೆ

Oplus_131072

ಉಡುಪಿ, ಆ.16: ಉಡುಪಿ ತಾಲೂಕು ಮೂಡನಿಡಂಬೂರು ಗ್ರಾಮದ ಕಾಡಬೆಟ್ಟು ಪುಳಿಮರ ಸಂಕ ಎಂಬಲ್ಲಿ ಬಾಡಿಗೆ ಮನೆಯಲ್ಲಿ ವಾಸವಿದ್ದ ಜ್ಯೋತಿ (34) ಎಂಬ ಮಹಿಳೆಯು ಆಗಸ್ಟ್ 06 ರಂದು ಮನೆಯಿಂದ ಹೊರಗೆ ಹೋದವರು ವಾಪಾಸು ಬಾರದೇ ನಾಪತ್ತೆಯಾಗಿರುತ್ತಾರೆ.

5 ಅಡಿ ಎತ್ತರ, ಉದ್ದ ಮುಖ, ಸಾಧಾರಣ ಮೈಕಟ್ಟು, ಗೋಧಿ ಮೈಬಣ್ಣ ಹೊಂದಿದ್ದು, ಕನ್ನಡ, ಹಿಂದಿ, ತೆಲುಗು ಹಾಗೂ ಲಮಾಣಿ ಭಾಷೆ ಮಾತನಾಡುತ್ತಾರೆ. ಇವರ ಬಗ್ಗೆ ಮಾಹಿತಿ ದೊರೆತಲ್ಲಿ ಉಡುಪಿ ನಗರ ಪೊಲೀಸ್ ಠಾಣಾಧಿಕಾರಿಯನ್ನು ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.

Leave a Reply

Your email address will not be published. Required fields are marked *

error: Content is protected !!