ಬಂಟ್ವಾಳ ಪುರಸಭಾ ಚುನಾವಣೆ: ಅಧ್ಯಕ್ಷ ಸ್ಥಾನ ಕಾಂಗ್ರೆಸ್‌ಗೆ, ಉಪಾಧ್ಯಕ್ಷ ಸ್ಥಾನ ಎಸ್‌ಡಿಪಿಐಗೆ!
ಬಂಟ್ವಾಳ: ಗುರುವಾರ ನಡೆದ ಬಂಟ್ವಾಳ ಪುರಸಭೆಯ ಅಧ್ಯಕ್ಷ ಉಪಾಧ್ಯಕ್ಷರ ಆಯ್ಕೆ ಪ್ರಕ್ರಿಯೆಯಲ್ಲಿ ಎಸ್‌ಡಿಪಿಐ ಮತ್ತು ಕಾಂಗ್ರೆಸ್ ಮೈತ್ರಿ ಮಾಡಿಕೊಂಡಿದ್ದು , ಅಧ್ಯಕ್ಷರಾಗಿ ಕಾಂಗ್ರೆಸ್ ಪಕ್ಷದ ಬಿ.ವಾಸು ಪೂಜಾರಿ ಲೊರೆಟ್ಟೊ ಮತ್ತು ಉಪಾಧ್ಯಕ್ಷರಾಗಿ ಎಸ್.ಡಿ.ಪಿ.ಐ.ನ ಮೊನೀಶ್ ಆಲಿ ಆಯ್ಕೆಯಾಗಿದ್ದಾರೆ.
27 ಸದಸ್ಯ ಬಲದ ಬಂಟ್ವಾಳ ಪುರಸಭೆಯಲ್ಲಿ ಕಾಂಗ್ರೆಸ್ ನಿಂದ ಆಯ್ಕೆಯಾಗಿದ್ದ ಗಂಗಾಧರ ರಾಜೀನಾಮೆ ನೀಡಿದ್ದರು. ಉಳಿದ 24 ಸ್ಥಾನಗಳ ಪೈಕಿ ಕಾಂಗ್ರೆಸ್‌ಗೆ ಮತ್ತು ಬಿಜೆಪಿಗೆ ತಲಾ 11 ಹಾಗೂ ಎಸ್‌ಡಿಪಿಐ 4 ಸದಸ್ಯರಿದ್ದರು. ಅಧ್ಯಕ್ಷ, ಉಪಾಧ್ಯಕ್ಷ ಚುನಾವಣೆ ಆಯ್ಕೆ ಸಂದರ್ಭ ಲೋಕಸಭೆ ಮತ್ತು ವಿಧಾನಸಭೆ ಸದಸ್ಯರ ಮತವೂ ಸೇರಿ ಬಿಜೆಪಿ 13, ಕಾಂಗ್ರೆಸ್ 11 ಮತ್ತು ಎಸ್.ಡಿ.ಪಿ.ಐ. 4 ಮತಗಳು ಇದ್ದವು. ಆಯ್ಕೆ ಪ್ರಕ್ರಿಯೆ ಸಂದರ್ಭ ಕಾಂಗ್ರೆಸ್ ಮತ್ತು ಎಸ್.ಡಿ.ಪಿ.ಐ.ಪರಸ್ಪರ ಪೂರಕವಾಗಿ ಹೊಂದಾಣಿಕೆಯಿಂದ ಮತ ಚಲಾಯಿಸಿದ ಪರಿಣಾಮ ಉಭಯ ಪಕ್ಷಗಳ ಅಭ್ಯರ್ಥಿಗಳಿಗೆ ಮತ ಚಲಾಯಿಸಿದರ ಪರಿಣಾಮ, ಕಾಂಗ್ರೆಸ್-ಎಸ್.ಡಿ.ಪಿ.ಐ. ಅಭ್ಯರ್ಥಿಗಳಿಗೆ 15, ಬಿಜೆಪಿ ಅಭ್ಯರ್ಥಿಗಳಿಗೆ 13 ಮತಗಳು ಲಭಿಸಿದವು. ಇನ್ನು ಈ ಮೈತ್ರಿಯನ್ನು ಬಿಜೆಪಿ ಟೀಕಿಸಿದ್ದು, ನಿಷೇಧಿತ ಪಿಎಫ್‌ಐಯ ಮಾತೃ ಸಂಘಟನೆಯೊಂದಿಗೆ ಪರಿಸ್ಥಿತಿ ಕಾಂಗ್ರೆಸ್ ಗೆ ಬಂದಿರುವುದು ದುರದೃಷ್ಟಕರ ಎಂದು ಟೀಕಿಸಿದೆ.