ಕಂಚಿನಡ್ಕ ಟೋಲ್ ಕೇಂದ್ರ ರದ್ದು- ಕಾಂಗ್ರೆಸ್ ಹೋರಾಟಕ್ಕೆ ಸಂದ ಜಯ
ಕಾಪು, 23/08/24.
*ಕಾಪು ಬ್ಲಾಕ್ ಕಾಂಗ್ರೆಸ್ ಸಮಿತಿ ನೇತೃತ್ವದಲ್ಲಿ, ಮಾಜಿ ಸಚಿವರಾದ ವಿನಯ್ ಕುಮಾರ್ ಸೊರಕೆಯವರ ನಾಯಕತ್ವದಲ್ಲಿ, ದಿನಾಂಕ 21.08.2024 ರಂದು ಕಂಚಿನಡ್ಕದಲ್ಲಿ, ಪ್ರಸ್ತಾವಿತ ಟೋಲ್ ಗೇಟನ್ನು ರದ್ದು ಮಾಡುವಂತೆ ಆಗ್ರಹಿಸಿ ನಡೆದ ಪ್ರತಿಭಟನೆ ಹಾಗೂ ದಿನಾಂಕ 22.08.2024 ರಂದು ಮಾನ್ಯ ಶ್ರೀ ವಿನಯ್ ಕುಮಾರ್ ಸೊರಕೆ ಯವರ ನೇತೃತ್ವದಲ್ಲಿ ಕಾಂಗ್ರೆಸ್ ಪಕ್ಷದ ನಿಯೋಗವು ಮಾನ್ಯ ಸಚಿವರಾದ ಸತೀಶ್ ಜಾರಕಿಹೊಳಿಯವರನ್ನು ಬೆಂಗಳೂರಿನಲ್ಲಿ ಭೇಟಿಯಾಗಿ ಸ್ಥಳೀಯ ಸಮಸ್ಯೆಗಳ ಬಗ್ಗೆ ವಿವರಿಸಿ ತಿಳಿಸಲಾಗಿತ್ತು. ಅದರ ಪರಿಣಾಮ ಇಂದು ಮಾನ್ಯ ಲೋಕೋಪಯೋಗಿ ಇಲಾಖೆ ಸಚಿವರ ಕಛೇರಿಯಿಂದ ಅಧಿಕೃತವಾಗಿ ಕಂಚನಡ್ಕ ಟೋಲ್ ಗೇಟ್ ನಿರ್ಮಾಣ ಕಾರ್ಯ ರದ್ದಾಗಿದೆ ಎಂದು ಆದೇಶ ಪತ್ರವನ್ನು ರವಾನಿಸಿದ್ದಾರೆ .
ಈ ಹೋರಾಟಕ್ಕೆ ಸಹಕರಿಸಿ ಬೆಂಬಲಿಸಿದ ಎಲ್ಲಾ ಸಾರ್ವಜನಿಕರಿಗೂ ಸಂಘಸಂಸ್ಥೆಗಳಿಗೂ.ಹಾಗೂ ಕಾಂಗ್ರೆಸ್ ಪಕ್ಷದ ಮುಖಂಡರಿಗೂ ಕಾರ್ಯಕರ್ತರಿಗೆ ಮಾಜಿ ಸಚಿವರಾದ ವಿನಯ್ ಕುಮಾರ್ ಸೊರಕೆ ಮತ್ತು ಕಾಂಗ್ರೆಸ್ ಪಕ್ಷದ ಮುಖಂಡರು ಧನ್ಯವಾದಗಳನ್ನು ಸಲಿಸಿರುತ್ತಾರೆ ಎಂದು ಕಾಪು ಬ್ಲಾಕ್ ಕಾಂಗ್ರೆಸ್ ಸಮಿತಿ ಪ್ರಕಟಣೆಯಲ್ಲಿ ತಿಳಿಸಿದೆ.
*