ಅಕ್ರಮ ಆಸ್ತಿ ಗಳಿಕೆ ಪ್ರಕರಣ: ಡಿಕೆಶಿ ವಿರುದ್ಧದ ಸಿಬಿಐ ತನಿಖೆ ವಾಪಸ್ ಪಡೆದಿದ್ದ ಸರಕಾರದ ಆದೇಶ ಎತ್ತಿಹಿಡಿದ ಹೈಕೋರ್ಟ್
ಬೆಂಗಳೂರು : ಡಿಸಿಎಂ ಡಿ.ಕೆ.ಶಿವಕುಮಾರ್ ವಿರುದ್ಧದ ಅಕ್ರಮ ಆಸ್ತಿ ಗಳಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ ತನಿಖೆ ವಾಪಸ್ ಪಡೆದಿದ್ದ ರಾಜ್ಯ ಸರಕಾರದ ಆದೇಶವನ್ನು ಹೈಕೋರ್ಟ್ ಎತ್ತಿಹಿಡಿದಿದೆ.
ಕ್ಯಾಬಿನೆಟ್ ನಿರ್ಧಾರ ಪ್ರಶ್ನಿಸಿ ಸಿಬಿಐ ಮತ್ತು ಬಸನಗೌಡ ಪಾಟೀಲ್ ಯತ್ನಾಳ್ ಸಲ್ಲಿಸಿದ್ದ ಅರ್ಜಿಗಳನ್ನು ವಜಾ ಮಾಡಿದ ಹೈಕೋರ್ಟ್, ಡಿ.ಕೆ.ಶಿವಕುಮಾರ್‌ಗೆ ಬಿಗ್ ರಿಲೀಫ್ ನೀಡಿದೆ.”