ಛತ್ರಪತಿ ಶಿವಾಜಿ ಪ್ರತಿಮೆ ಧರಾಶಾಹಿ: ಕ್ಷಮೆಯಾಚಿಸಿದ ಪ್ರಧಾನಿ ಮೋದಿ
ಮಹಾರಾಷ್ಟ್ರ, ಆ.30: ಮಹಾರಾಷ್ಟ್ರದ ಸಿಂಧುದುರ್ಗದಲ್ಲಿ ಛತ್ರಪತಿ ಶಿವಾಜಿ ಮಹಾರಾಜರ ಪ್ರತಿಮೆ ಧರಾಶಾಹಿಯಾದ ಘಟನೆಗೆ ಪ್ರಧಾನಿ ನರೇಂದ್ರ ಮೋದಿ ಕ್ಷಮೆಯಾಚಿಸಿದ್ದಾರೆ.
“ಛತ್ರಪತಿ ಶಿವಾಜಿ ಮಹಾರಾಜರು ನಮಗೆ ಕೇವಲ ಹೆಸರಲ್ಲ, ಇಂದು ನಾನು ನನ್ನ ದೇವರು ಛತ್ರಪತಿ ಶಿವಾಜಿ ಮಹಾರಾಜರಲ್ಲಿ ತಲೆಬಾಗಿ ಕ್ಷಮೆಯಾಚಿಸುತ್ತೇನೆ. ನಮ್ಮ ಮೌಲ್ಯಗಳು ವಿಭಿನ್ನವಾಗಿವೆ, ಭಾರತ ಮಾತೆಯ ಮಹಾನ್ ಮಗ, ಈ ನೆಲದ ಮಗ ವೀರ್ ಸಾವರ್ಕರ್ ಅವರನ್ನು ನಿಂದಿಸುವ ಮತ್ತು ಅವಮಾನಿಸುವ ಜನರಲ್ಲ. ಅವರು ಕ್ಷಮೆ ಕೇಳಲು ಸಿದ್ಧರಿಲ್ಲ, ನ್ಯಾಯಾಲಯದ ಮೊರೆ ಹೋಗಿ ಹೋರಾಟಕ್ಕೆ ಸಿದ್ಧರಿದ್ದಾರೆ,” ಎಂದರು.ಆಗಸ್ಟ್ 26 ರಂದು 35 ಅಡಿ ಎತ್ತರದ ಛತ್ರಪತಿ ಶಿವಾಜಿ ಮಹಾರಾಜರ ಪ್ರತಿಮೆ ಕುಸಿತದ ವಿವಾದದ ನಡುವೆಯೇ ಪ್ರಧಾನಿ ಪ್ರತಿಕ್ರಿಯೆ ನೀಡಿದ್ದಾರೆ.