ಬ್ರಹ್ಮಾವರ: ಕಂಟೈನರ್ ಢಿಕ್ಕಿ- ರಸ್ತೆ ದಾಟುತ್ತಿದ್ದ ವ್ಯಕ್ತಿ ಮೃತ್ಯು

ಬ್ರಹ್ಮಾವರ, ಸೆ.3: ಕಂಟೈನರ್ ಢಿಕ್ಕಿ ಹೊಡೆದ ಪರಿಣಾಮ ರಸ್ತೆ ದಾಟುತ್ತಿದ್ದ ವ್ಯಕ್ತಿಯೊಬ್ಬರು ಮೃತಪಟ್ಟ ಘಟನೆ ಬ್ರಹ್ಮಾವರ ಧರ್ಮಾವರಂ ಆಡಿಟೋರಿಯಂ ಹತ್ತಿರದ ಪೂಜಾ ಹೋಟೆಲ್ ಎದುರಿನಲ್ಲಿ ಸೆ.2ರಂದು ಸಂಜೆ ವೇಳೆ ನಡೆದಿದೆ.

ಮೃತರನ್ನು ಬ್ರಹ್ಮಾವರದ ಲಿಗೋರಿ ಡಿಸೋಜ(74) ಎಂದು ಗುರುತಿಸಲಾಗಿದೆ. ಕುಂದಾಪುರ ಕಡೆಯಿಂದ ಉಡುಪಿ ಕಡೆಗೆ ಹೋಗುತ್ತಿದ್ದ ಕಂಟೈನರ್ ರಸ್ತೆ ದಾಟುತ್ತಿದ್ದ ಲಿಗೋರಿ ಡಿಸೋಜ ಅವರಿಗೆ ಢಿಕ್ಕಿ ಹೊಡೆಯಿತ್ತೆನ್ನಲಾಗಿದೆ.

ಇದರಿಂದ ಗಂಭೀರವಾಗಿ ಗಾಯಗೊಂಡ ಲಿಗೋರಿ ಡಿಸೋಜ ಬ್ರಹ್ಮಾವರ ಸಮುದಾಯ ಆರೋಗ್ಯ ಕೇಂದ್ರಕ್ಕೆ ಕರೆದು ಕೊಂಡು ಹೋಗುವ ದಾರಿ ಮಧ್ಯೆ ಮೃತಪಟ್ಟರೆಂದು ತಿಳಿದುಬಂದಿದೆ. ಅಪಘಾತ ನಡೆಸಿದ ಕಂಟೈನರ್ ಚಾಲಕ ವಾಹನ ವನ್ನು ನಿಲ್ಲಿಸದೇ ಪರಾರಿಯಾಗಿದ್ದಾನೆ. ಈ ಬಗ್ಗೆ ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.”

Leave a Reply

Your email address will not be published. Required fields are marked *

error: Content is protected !!