ಕಾಂಗ್ರೆಸ್ ಸರ್ಕಾರದ ಭ್ರಷ್ಟಾಚಾರದ ವಿರುದ್ಧ ಬಿಜೆಪಿ ಮತ್ತೊಂದು ಪಾದಯಾತ್ರೆ- ಜೋಶಿ
ನವದೆಹಲಿ, ಸೆ.05: ಕರ್ನಾಟಕದ ಕಾಂಗ್ರೆಸ್ ಸರ್ಕಾರದ ಭ್ರಷ್ಟಾಚಾರದ ವಿರುದ್ಧ ಬಿಜೆಪಿ ಮತ್ತೊಂದು ಪಾದಯಾತ್ರೆ ನಡೆಸುವ ಮೂಲಕ ಹೋರಾಟವನ್ನು ಮತ್ತಷ್ಟು ತೀವ್ರಗೊಳಿಸಲು ನಿರ್ಧರಿಸಿದೆ ಎಂದು ಕೇಂದ್ರ ಆಹಾರ ಸಚಿವ ಪ್ರಲ್ಹಾದ ಜೋಶಿ ಹೇಳಿದರು.
ಮುಡಾ ಹಗರಣ ವಿರೋಧಿಸಿ ಬಿಜೆಪಿ ಹಾಗೂ ಜೆಡಿಎಸ್ ನಾಯಕರು ಬೆಂಗಳೂರಿನಿಂದ ಮೈಸೂರಿನವರೆಗೆ ಪಾದಯಾತ್ರೆ ನಡೆಸಿದ್ದರು. ಬಸನಗೌಡ ಪಾಟೀಲ ಯತ್ನಾಳ ನೇತೃತ್ವದ ವಿರೋಧಿ ಬಣ ಮೈಸೂರು ಚಲೋ ಕಡೆ ಮುಖ ಮಾಡಿರಲಿಲ್ಲ. ಅಲ್ಲದೇ ಡಿ.ಕೆ.ಶಿವಕುಮಾರ್ ಅವರನ್ನು ಮುಖ್ಯಮಂತ್ರಿ ಮಾಡುವ ಉದ್ದೇ ಶದ ಪಾದಯಾತ್ರೆ ಹಮ್ಮಿಕೊಳ್ಳಲಾಗಿದೆ’ ಎಂದು ಯತ್ನಾಳ ಲೇವಡಿ ಮಾಡಿದರು.
ಬಳಿಕ ಬೆಳಗಾವಿಯ ರೆಸಾರ್ಟ್ ನಲ್ಲಿ ಬಿಜೆಪಿಯ ಅತೃಪ್ತ ನಾಯಕರು ಸಭೆ ನಡೆಸಿದ್ದರು. ವಾಲ್ಮೀ ಕಿ ಅಭಿವೃದ್ಧಿ ನಿಗಮದ ಭ್ರಷ್ಟಾಚಾರ ಖಂಡಿಸಿ ಕೂಡಲಸಂಗಮದಿಂದ ಬಳ್ಳಾರಿಯ ವರೆಗೆ ಪಾದಯಾತ್ರೆ ಮಾಡಲು ತೀ ರ್ಮಾನಿಸಿದ್ದರು. ಬುಧವಾರ ಸುದ್ದಿಗಾರರ ಜತೆಗೆಮಾತನಾಡಿದ ಜೋಶಿ, ವಾಲ್ಮೀ ಕಿ ಹಗರಣ, ಮುಡಾ ಹಗರಣದ ವಿರುದ್ಧ ಬಿಜೆಪಿ ಹೋರಾಟ ನಿಲ್ಲದು ಎಂದರು.
ಸಿದ್ದು ರಾಜೀನಾಮೆ ಖಚಿತ: ವಿಜಯೇಂದ್ರ: ಬಿಜೆಪಿ ಕಚೇರಿಯಲ್ಲಿ ಬುಧವಾರ ಸದಸ್ಯತ್ವಅಭಿಯಾನಕ್ಕೆ ಚಾಲನೆ ನೀಡಿ ಮಾತನಾಡಿದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ವಾಲ್ಮೀಕಿ ಅಭಿವೃದ್ಧಿ ನಿಗಮದ ಅಧಿಕಾರಿ ಆತ್ಮಹತ್ಯೆ ಮಾಡಿಕೊಂಡಾಗ ಹಗರಣವೇ ನಡೆದಿಲ್ಲ ಎಂದವರು. ಈಗ 87 ಕೋಟಿ ರೂ. ಅವ್ಯವಹಾರವಾಗಿದೆ ಎನ್ನುತ್ತಿದ್ದಾರೆ. ಮುಡಾ ಹಗರಣದಲ್ಲಿ ಈಗ ಹಿಂದಿನ ಆಯುಕ್ತರನ್ನು ಅಮಾನತು ಮಾಡಿ ತಪ್ಪು ಒಪ್ಪಿಕೊಂಡಂತಾಗಿದೆ. ಸಿಎಂ ರಾಜೀನಾಮೆಯಿಂದ ತಪ್ಪಿಸಿಕೊಳ್ಳುವುದಕ್ಕೆ ಸಾಧ್ಯವೇ ಇಲ್ಲ ಎಂದು ವಿಶ್ವಾಸ ವ್ಯಕ್ತಪಡಿಸಿದರು.