ಗಣೇಶನ ವಿಗ್ರಹ ತರಲು ಹೋಗುತ್ತಿದ್ದ ವಾಹನ ಅಪಘಾತ: ಇಬ್ಬರು ಸ್ಥಳದಲ್ಲೇ ಮೃತ್ಯು

ಚಿಕ್ಕಮಗಳೂರು: ತರೀಕೆರೆ ತಾಲೂಕಿನ ಭೈರಾಪುರ ಗೇಟ್ ಹತ್ತಿರ ಗಣೇಶ ಮೂರ್ತಿ ತರಲು ಹೋಗುತ್ತಿದ್ದಾಗ ಚಾಲಕನ ನಿಯಂತ್ರಣ ತಪ್ಪಿ ಟಾಟಾ ಏಸ್ ಒಂದು ಪಲ್ಟಿಯಾಗಿ ಇಬ್ಬರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ನಡೆದಿದೆ.

ಶ್ರೀಧರ್ (20) ಧನುಷ್ (20) ಮೃತ ಯುವಕರು. ಗಣಪತಿ ತರಲು 9 ಜನ ಯುವಕರು ಹೋಗುತ್ತಿದ್ದರು. ಭೈರಾಪುರ ಗೇಟ್ ಬಳಿ ರಸ್ತೆ ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಟಾಟಾ ಏಸ್ ವಾಹನ ಪಲ್ಟಿಯಾಗಿದೆ. ಈ ಘಟನೆಯಲ್ಲಿ ಇಬ್ಬರು ಯುವಕರ ತಲೆಗೆ ಗಂಭೀರ ಗಾಯವಾಗಿದ್ದು ಅವರನ್ನು ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಿದ್ದು, ಇನ್ನು ಮೂವರು ಯುವಕರನ್ನು ತರೀಕೆರೆ ತಾಲೂಕು ಆಸ್ಪತ್ರೆಗೆ ದಾಖಲಿಸಲಾಗಿದೆ.

ಮೃತರು ಹಾಗೂ ಗಾಯಾಳುಗಳೆಲ್ಲರು ಲಿಂಗದಹಳ್ಳಿ ನಿವಾಸಿಗಳು ಎಂದು ತಿಳಿದು ಬಂದಿದೆ. ಈ ಘಟನೆಯು ಲಿಂಗದಹಳ್ಳಿ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

Leave a Reply

Your email address will not be published. Required fields are marked *

error: Content is protected !!