ಬಿಹಾರ ಚುನಾವಣೋತ್ತರ ಸಮೀಕ್ಷೆ: ಎನ್ಡಿಎಗೆ ಸೋಲು, ಮಹಾಘಟಬಂಧನ್ ಗೆ ಹೆಚ್ಚು ಸ್ಥಾನ?
ಪಾಟ್ನಾ: ದೇಶಾದ್ಯಂತ ತೀವ್ರ ಕುತೂಹಲಕ್ಕೆ ಕಾರಣವಾಗಿದ್ದ ಬಿಹಾರ ವಿಧಾನಸಭೆ ಚುನಾವಣೆಯ ಮೂರನೇ ಹಾಗೂ ಕೊನೆಯ ಹಂತದ ಮತದಾನಕ್ಕೆ ಶನಿವಾರ ಸಂಜೆ ತೆರೆ ಬಿದ್ದಿದ್ದು, ಈಗ ಚುನಾವಣೋತ್ತರ ಸಮೀಕ್ಷೆಗಳ ಭರಾಟೆ ಆರಂಭವಾಗಿದೆ.
ಹಲವು ಸಮೀಕ್ಷೆಗಳ ಪ್ರಕಾರ, ಬಿಹಾರ ಮತದಾರ ಈ ಬಾರಿಯೂ ಯಾವುದೇ ಪಕ್ಷಕ್ಕೆ ಸ್ಪಷ್ಟ ಬಹುಮತ ನೀಡದೇ ಇರುವುದರಿಂದ ಮತ್ತೆ ಅತಂತ್ರ ವಿಧಾನಸಭೆ ನಿರ್ಮಾಣವಾಗುವ ಸಾಧ್ಯತೆ ಇದೆ. ಆದರೆ ತೇಜಶ್ವಿ ಯಾದವ್ ನೇತೃತ್ವದ ಮಹಾಘಟಬಂಧನ್ ಅತಿ ಹೆಚ್ಚು ಸ್ಥಾನಗಳನ್ನು ಪಡೆಯಲಿದೆ ಎಂದು ಸಮೀಕ್ಷೆಗಳು ತಿಳಿಸಿವೆ.
ಟುಡೇಯ್ಸ್ ಚಾಣಕ್ಯ ಸಮೀಕ್ಷೆ
ಆರ್ಜೆಡಿ ನೇತೃತ್ವದಲ್ಲಿ ಮಹಾಘಟಬಂಧನ : 108 -131
ಜೆಡಿಯು ನೇತೃತ್ವದ ಎನ್ಡಿಎ : 104 – 128
ಇತರರು: 4-8
ಇಂಡಿಯಾ ಟಿವಿ-ಸಿ ವೋಟರ್ ಸಮೀಕ್ಷೆ
ಜೆಡಿಯು-ಬಿಜೆಪಿ ಮೈತ್ರಿಕೂಟ – 116
ಮಹಾಘಟಬಂಧನ್ – 120
ಎಲ್ ಜೆಪಿ – 1
ಇತರೆ – 6
ಜನ್ ಕಿ ಬಾತ್ (ರಿಪಬ್ಲಿಕ್)
ಬಿಜೆಪಿ : 60-75
ಜೆಡಿ(ಯು) : 31-42
ಆರ್ಜೆಡಿ : 91-79
ಎಲ್ಜೆಪಿ : 8-5
ಒಟ್ಟು 243 ಸ್ಥಾನಗಳಿದ್ದು ಬಹುಮತಕ್ಕೆ 122 ಸ್ಥಾನಗಳ ಅಗತ್ಯವಿದೆ. 2015ರ ಚುನಾವಣೆಯ ಸಂದರ್ಭದಲ್ಲಿ ಜೆಡಿಯು, ಆರ್ಜೆಡಿ , ಕಾಂಗ್ರೆಸ್ ಸೇರಿಕೊಂಡು ಮಹಾಘಟಬಂಧನ್ ಮಾಡಿಕೊಂಡಿತ್ತು. ಪರಿಣಾಮ 243 ಕ್ಷೇತ್ರಗಳ ಪೈಕಿ ಆರ್ಜೆಡಿ 80, ಜೆಡಿಯು 71, ಬಿಜೆಪಿ 53, ಕಾಂಗ್ರೆಸ್ 27, ಇತರರು 12 ಸ್ಥಾನಗಳಲ್ಲಿ ಜಯಗಳಿಸಿದ್ದರು. ಚುನಾವಣೆಯಲ್ಲಿ ಮಹಾಘಟಬಂಧನ್ ಯಶಸ್ವಿಯಾದ ಕಾರಣ ಎರಡು ಪಕ್ಷಗಳ ಬೆಂಬಲ ಪಡೆದು ನಿತೀಶ್ ಕುಮಾರ್ ಸಿಎಂ ಪಟ್ಟವನ್ನು ಏರಿದ್ದರು. ಆದರೆ ಮಹಾಮೈತ್ರಿಯಲ್ಲಿ ಭಿನ್ನಾಭಿಪ್ರಾಯ ವ್ಯಕ್ತಗಿದ್ದರಿಂದ 2017ರಲ್ಲಿ ಜೆಡಿಯು, ಬಿಜೆಪಿ ಮೈತ್ರಿ ಅಧಿಕಾರಕ್ಕೆ ಬಂದಿತ್ತು