ಮಲ್ಪೆ ಬಂದರಿನಲ್ಲಿ 35 ವರ್ಷದ ಯುವಕ ಹೃದಯಾಘಾತದಿಂದ ಮೃತ್ಯು
ಉಡುಪಿ: ಮಲ್ಪೆಮೀನುಗಾರಿಕಾ ಬಂದರಿನಲ್ಲಿ ಸುಮಾರು 35 ವರ್ಷ ಪ್ರಾಯದ ಯುವಕನೋರ್ವ ಹೃದಯಾಘಾತದಿಂದ ಮೃತಪಟ್ಟ ಘಟನೆ ಇಂದು ಮುಂಜಾನೆ ನಡೆದಿದೆ.
ಮಲ್ಪೆ ಬಂದರಿನಲ್ಲಿ ಮೀನುಗಾರಿಕೆ ಕೆಲಸಕ್ಕೆ ಬಂದಿದ್ದ ಈ ಯುವಕ ಅಸ್ವಸ್ಥಗೊಂಡು ಕುಸಿದು ಬಿದ್ದ ಎನ್ನಲಾಗಿದೆ. ಸ್ಥಳೀಯರ ಕರೆಯಂತೆ ಸ್ಥಳಕ್ಕೆ ಧಾವಿಸಿದ ಆಪತ್ಬಾಂಧವ ಈಶ್ವರ್ ಮಲ್ಪೆ ಮತ್ತು ತಂಡ ಪ್ರಥಮ ಚಿಕಿತ್ಸಾ ವಿಧಾನವನ್ನು ನಡೆಸಿದರು. ಇದಕ್ಕೆ ಸ್ಪಂದಿಸದ ಯುವಕನನ್ನು ಕೂಡಲೇ ಉಡುಪಿಯ ಅಜ್ಜರಕಾಡು ಜಿಲ್ಲಾಸ್ಪತ್ರೆಗೆ ದಾಖಲಿಸಲಾಯಿತು. ಅಲ್ಲಿ ಪರೀಕ್ಷಿಸಿದ ವೈದ್ಯರು ಯುವಕ ಈಗಾಗಲೇ ಮೃತಪಟ್ಟಿರುವುದಾಗಿ ಘೋಷಿಸಿದರು.