ಶಾಸಕ ಯಶ್‌ಪಾಲ್ ಸುವರ್ಣ, ನಗರಸಭಾ ಅಧ್ಯಕ್ಷ ಪ್ರಭಾಕರ ಪೂಜಾರಿ ಸಹಿತ11 ಮಂದಿ ವಿರುದ್ಧ ಎಫ್‌ಐಆರ್‌

ಉಡುಪಿ, ಸೆ.9: ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರತಿಭಟನೆ ನಡೆಸಿ ಅವರ ಪ್ರತಿಕೃತಿಗೆ ಚಪ್ಪಲಿ ಏಟು ಹಾಗೂ ಬೆಂಕಿ ಹಚ್ಚಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಉಡುಪಿ ಶಾಸಕ ಯಶ್‌ಪಾಲ್ ಸುವರ್ಣ ಸೇರಿ 11 ಮಂದಿ ಬಿಜೆಪಿ ಮುಖಂಡರ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ.

ಪ್ರಾಂಶುಪಾಲರ ಪ್ರಶಸ್ತಿ ವಾಪಸ್ ಪಡೆದ ವಿಚಾರವಾಗಿ ಮಣಿಪಾಲದ ಸಿಂಡಿಕೇಟ್ ಸರ್ಕಲ್‌ನಲ್ಲಿ ಸೆ.6ರಂದು ಪ್ರತಿಭಟನೆ ನಡೆಸಲಾಗಿತ್ತು. ಈ ವೇಳೆ ಹೆದ್ದಾರಿ ತಡೆದು ಬಿಜೆಪಿ ಮುಖಂಡರು ಸಿಎಂ ಪ್ರತಿಕೃತಿಗೆ ಬೆಂಕಿ ಹಚ್ಚಿದ್ದರು. ಅಲ್ಲದೇ ಹಿಂದೂ ವಿರೋಧಿ ಸಿದ್ದರಾಮಯ್ಯ ತೊಲಗಿಸಿ ಎಂದು ಘೋಷಣೆ ಕೂಡ ಕೂಗಿದ್ದರು ಈ ಸಂದರ್ಭ ನಗರಸಭಾ ಸದಸ್ಯ ಗಿರೀಶ್ ಅಂಚನ್, ಯುವ ಮೋರ್ಚಾ ಮುಖಂಡ ಪೃಥ್ವಿರಾಜ್ ಶೆಟ್ಟಿ ಸಿಎಂ ಪ್ರತಿಕೃತಿಗೆ ಚಪ್ಪಲಿಯಿಂದ ಹೊಡೆದಿದ್ದರು. ಈ ಕುರಿತು ಎನ್‌ಎಸ್‌ಯುಐ ಮುಖಂಡ ಸೌರಭ್ ಬಲ್ಲಾಳ್ ಶಾಂತಿಭಂಗ ತರುವ ಉದ್ದೇಶದಿಂದ ಕೃತ್ಯ ಎಸೆಗಿದ್ದಾರೆ ಎಂದು ದೂರು ನೀಡಿದ್ದಾರೆ.

ಈ ಪ್ರಕರಣದಲ್ಲಿ ಯಶ್‌ಪಾಲ್ ಸುವರ್ಣ ಎ5 ಆರೋಪಿಯಾಗಿದ್ದಾರೆ. ನಗರಸಭಾ ಅಧ್ಯಕ್ಷ ಪ್ರಭಾಕರ ಪೂಜಾರಿ, ಸದಸ್ಯರಾದ ಗಿರೀಶ್ ಅಂಚನ್, ವಿಜಯ ಕೊಡವೂರು, ಬಾಲಕೃಷ್ಣ ಶೆಟ್ಟಿ ವಿರುದ್ಧವೂ ದೂರು ನೀಡಲಾಗಿದೆ. ಮಣಿಪಾಲ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ನನ್ನ ಹಾಗೂ ಬಿಜೆಪಿ ಕಾರ್ಯಕರ್ತರ ಮೇಲೆ ನೂರು ಕೇಸು ದಾಖಲಿಸಿದರೂ ಧೃತಿಗೆಡುವ ಪ್ರಶ್ನೆಯೇ ಇಲ್ಲ- ಶಾಸಕ ಯಶ್ ಪಾಲ್ ಸುವರ್ಣ

ಉಡುಪಿ ಜಿಲ್ಲೆಯ ಶಿಕ್ಷಣ ವ್ಯವಸ್ಥೆ ವಿಶ್ವ ಮಾನ್ಯತೆ ಪಡೆದಿದ್ದು, ಜಿಲ್ಲೆಯ ಯುವ ಸಮುದಾಯವನ್ನು ದೇಶದ ಆಸ್ತಿಯನ್ನಾಗಿಸುವ ಶಿಕ್ಷಕರಿಗೆ ಮಾಡಿದ ಅಪಮಾನವನ್ನು ಸಹಿಸಲು ಸಾಧ್ಯವಿಲ್ಲ.

ಮತೀಯ ಶಕ್ತಿಗಳ ಕುಮ್ಮಕ್ಕಿನಿಂದ ಶಿಕ್ಷಕ ಪ್ರಶಸ್ತಿಯನ್ನು ಹಿಂಪಡೆದು ಜಿಲ್ಲೆಯ ಶಿಕ್ಷಕರ ನೈತಿಕ ಸ್ಥೈರ್ಯ ಕುಗ್ಗಿಸಲು ಮುಂದಾದಾಗ ಜವಾಬ್ದಾರಿಯುತ ಶಾಸಕನಾಗಿ ಶಿಕ್ಷಕರ ಜೊತೆ ಸದಾ ನಿಲ್ಲುತ್ತೇನೆ.

Leave a Reply

Your email address will not be published. Required fields are marked *

error: Content is protected !!