ಪಿಎಸ್‍ಐ ನೇಮಕಾತಿ ಪರೀಕ್ಷೆ ಸೆ.28ಕ್ಕೆ ಮುಂದೂಡಿಕೆ -ಗೃಹಸಚಿವ ಜಿ.ಪರಮೇಶ್ವರ್
ಬೆಂಗಳೂರು, ಸೆ.12: ಅಭ್ಯರ್ಥಿಗಳು ಹಾಗೂ ಬಿಜೆಪಿ ನಾಯಕರ ಒತ್ತಾಯಕ್ಕೆ ಮಣಿದ ಸರ್ಕಾರ ಪಿಎಸ್‌ಐ ನೇಮಕಾತಿ ಪರೀಕ್ಷೆಯನ್ನು ಮುಂದೂಡಿದೆ. ಸೆಪ್ಟೆಂಬರ್ 28ಕ್ಕೆ ಪಿಎಸ್‌ಐ ನೇಮಕಾತಿ ಪರೀಕ್ಷೆ ನಡೆಸಲು ನಿರ್ಧಾರ ಮಾಡಲಾಗಿದೆ. ಪಿಎಸ್‍ಐ ಪರೀಕ್ಷೆಯನ್ನು ಸೆ.22ರ ಬದಲು ಸೆ.28ರ ಶನಿವಾರ ನಡೆಸಲು ತೀರ್ಮಾನಿಸಲಾಗಿದೆ.
ಯುಪಿಎಸ್‍ಸಿ ಪರೀಕ್ಷೆ ಹಾಗೂ ಪಿಎಸ್‍ಐ ಪರೀಕ್ಷೆ ಒಂದೇ ದಿನ ನಿಗದಿಯಾಗಿತ್ತು. ಈ ವಿಚಾರವಾಗಿ ಐಪಿಎಸ್ ಪರೀಕ್ಷೆ ಮುಂದೂಡಿಕೆ ಮಾಡಲು ಮನವಿ ಮಾಡಲಾಗಿತ್ತು. ಅದರಂತೆ ಪಿಎಸ್‍ಐ ಪರೀಕ್ಷೆ ಮುಂದೂಡಲಾಗಿದೆ ಎಂದು ಗೃಹಸಚಿವ ಜಿ.ಪರಮೇಶ್ವರ್ ಹೇಳಿದ್ದಾರೆ.
ಯುಪಿಎಸ್‍ಸಿ ಪರೀಕ್ಷೆ ಕೂಡ ಸೆ.22ಕ್ಕೆ ಇದೆ. ನಮ್ಮ ರಾಜ್ಯದಿಂದ 100ಕ್ಕೂ ಹೆಚ್ಚು ಜನ ಪ್ರಿಲಿಮ್ಸ್ ಪಾಸ್ ಮಾಡಿದ್ದಾರೆ. ಅವರಿಗೆ ಅವಕಾಶ ತಪ್ಪಿಹೋಗಬಾರದು. ಹಾಗಾಗಿ ಮುಂದೂಡಲು ಹೇಳಿದ್ರು. ಬಿಜೆಪಿ ನವರು ಕೂಡ ಮನವಿ ಮಾಡಿದ್ರು. ನಾವು ಪರಿಶೀಲನೆ ಮಾಡಿ, ಚರ್ಚೆ ನಡೆಸಿದ್ದೇವೆ ಎಂದು ಗೃಹಸಚಿವ ಜಿ.ಪರಮೇಶ್ವರ್ ತಿಳಿಸಿದ್ದಾರೆ.