ಸುರತ್ಕಲ್: ಮಸೀದಿಗೆ ಕಲ್ಲು ತೂರಿದ ದುಷ್ಕರ್ಮಿಗಳು
ಮಂಗಳೂರು: ದುಷ್ಕರ್ಮಿಗಳ ಗುಂಪೊಂದು ಮಸೀದಿಗೆ ಕಲ್ಲು ತೂರಾಟ ನಡೆಸಿದ ಘಟನೆ ಕಾಟಿಪ್ಪಳ್ಳದಲ್ಲಿ ನಡೆದಿದೆ.
ಕಾಟಿಪ್ಪಳ್ಳದ ಮೂರನೇ ಬ್ಲಾಕ್‌ನಲ್ಲಿರುವ ಬದ್ರಿಯಾ ಜುಮಾ ಮಸೀದಿಗೆ ಬೈಕ್‌ನಲ್ಲಿ ಬಂದ ದುಷ್ಕರ್ಮಿಗಳು ಕಲ್ಲು ಎಸೆದಿದ್ದಾರೆ ಎಂದು ತಿಳಿದು ಬಂದಿದೆ.
ಸುರತ್ಕಲ್ ಪೊಲೀಸರು ಸ್ಥಳಕ್ಕೆ ಆಗಮಿಸಿದ್ದು, ತನಿಖೆ ಆರಂಭಿಸಿದ್ದಾರೆ.
ಪ್ರಚೋದನಕಾರಿ ಹೇಳಿಕೆ ನೀಡಿದ ವಿಚಾರವಾಗಿ ವಿಎಚ್ಪಿ ಹಾಗೂ ಬಜರಂಗದಳ ಮುಖಂಡರಾದ ಶರಣ್ ಪಂಪ್ವೆಲ್ ಮತ್ತು ಪುನೀತ್ ಅತ್ತಾವರ ಅವರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ಸಾಮಾಜಿಕ ಜಾಲತಾಣದ ಮೂಲಕ ಹೇಳಿಕೆ ಹರಿಬಿಟ್ಟಿದ್ದ ಪುನಿತ್ ಅತ್ತಾವರ ವಿರುದ್ಧ ಮಂಗಳೂರಿನ ಸೆನ್ ಕ್ರೈಮ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಸಾಮಾಜಿಕ ಜಾಲತಾಣಗಳ ಮೇಲೆ ನಿಗಾ ವಹಿಸಿರುವ ಮಂಗಳೂರು ಪೊಲೀಸರು, ಪ್ರಚೋದನಾಕಾರಿ ಹೇಳಿಕೆ ನೀಡುವವರ ವಿರುದ್ಧ ಕ್ರಮ ಕೈಗೊಳ್ಳುತ್ತಿದ್ದಾರೆ. ಈ ಬಗ್ಗೆ ಮಂಗಳೂರು ಪೊಲೀಸ್ ಕಮಿಷನರ್ ಅನುಪಮ್ ಅಗರ್ವಾಲ್ ಈಗಾಗಲೇ ಎಚ್ಚರಿಕೆಯನ್ನೂ ನೀಡಿದ್ದಾರೆ.