‘ರಾಜ್ಯದಲ್ಲಿ ಅಪರಾಧಿಗಳ ಮೇಲುಗೈ’ :ಶೋಭಾ ಕರಂದ್ಲಾಜೆ
ಬೆಂಗಳೂರು, ಸೆ.17: ಕರ್ನಾಟಕ ರಾಜ್ಯದಲ್ಲಿ ಅಪರಾಧಿಗಳ ಮೇಲುಗೈ ಆಗುತ್ತಿದೆ ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಅವರು ಕಳವಳ ವ್ಯಕ್ತಪಡಿಸಿದರು.
ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ “ಜಗನ್ನಾಥ ಭವನ”ದಲ್ಲಿ ಇಂದು ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು, ರಾಜ್ಯದಲ್ಲಿ ದೇಶದ್ರೋಹಿಗಳು ಮೇಲುಗೈ ಸಾಧಿಸುತ್ತಿದ್ದಾರೆ. ವಿಧಾನಸೌಧದಲ್ಲಿ ಪಾಕಿಸ್ತಾನ ಜಿಂದಾಬಾದ್ ಘೋಷಣೆ ಕೂಗಿದವರಿಗೆ ಶಿಕ್ಷೆ ವಿಧಿಸಿಲ್ಲ. ದೇಶದ್ರೋಹಕ್ಕೆ ಕುಮ್ಮಕ್ಕು ಕೊಡುವ ಸರಕಾರ ಅಧಿಕಾರದಲ್ಲಿದೆ ಎಂದು ಟೀಕಿಸಿದರು.
ಬೆಂಗಳೂರು, ಮೈಸೂರು, ಕೊಡಗು, ಹಾಸನ, ಕೋಲಾರ, ನಾಗಮಂಗಲ ಸೇರಿ ಬೇರೆ ಬೇರೆ ಜಾಗಗಳಲ್ಲಿ ಇವತ್ತು ಪಾಕಿಸ್ತಾನ ಜಿಂದಾಬಾದ್ ಘೋಷಣೆ ಕೇಳಿಬರುತ್ತಿದೆ. ಪ್ಯಾಲೆಸ್ಟೀನ್ ಧ್ವಜ ಹಾರುತ್ತಿದೆ. ಆದರೆ, ರಾಜ್ಯ ಸರಕಾರ ಓಲೈಕೆ ರಾಜಕೀಯದಲ್ಲಿ ನಿರತವಾಗಿದೆ. ದೇಶದ್ರೋಹ ಮಾಡಿದರೂ ಅಡ್ಡಿ ಇಲ್ಲ; ನಮಗೆ ವೋಟ್ ಬ್ಯಾಂಕ್ ಬೇಕು ಎಂಬ ಮಾನಸಿಕತೆ ಇರುವ ಸಿದ್ದರಾಮಯ್ಯನವ ರಿಂದ ನಾವು ದೇಶಪ್ರೇಮ, ಕಾನೂನಿನ ಅನುಷ್ಠಾನ ನಿರೀಕ್ಷೆ ಮಾಡುವುದು ಹೇಗೆ ಸಾಧ್ಯ ಎಂದು ಅವರು ಪ್ರಶ್ನಿಸಿದರು