ಮೆಡಿಕಲ್ ಸ್ಟೋರ್’ಗಳಲ್ಲಿ ಸಿಂಥೆಟಿಕ್ ಡ್ರಗ್ಸ್ ಮಾರಾಟಕ್ಕೆ ಕಡಿವಾಣ ಹಾಕಲು ಕ್ರಮ: ಡಾ.ಜಿ ಪರಮೇಶ್ವರ್

ಬೆಂಗಳೂರು: ಇತ್ತೀಚಿನ ದಿನಗಳಲ್ಲಿ ಡ್ರಗ್ಸ್ ಹಾವಳಿ ಹೆಚ್ಚಾಗಿದ್ದು, ಯುವಜನತೆಗೆ ಸುಲಭವಾಗಿ ಮಾರುಕಟ್ಟೆಗಳಲ್ಲಿ ಮಾದಕ ವಸ್ತು, ಡಗ್ಸ್ ದೊರಕುತ್ತಿದೆ ಎಂಬ ಆರೋಪ ಸಾಕಷ್ಟು ಕೇಳಿಬರುತ್ತಿದೆ.

ಈ ಬಗ್ಗೆ ಪ್ರತಿಕ್ರಿಯಿಸಿರುವ ಗೃಹ ಸಚಿವ ಡಾ ಜಿ ಪರಮೇಶ್ವರ್, ಕರ್ನಾಟಕದಲ್ಲಿ ಡ್ರಗ್ಸ್ ದಂಧೆ ಹತ್ತಿಕ್ಕಲು ಕ್ರಮ ಕೈಗೊಳ್ಳುತ್ತೇವೆ. ಡ್ರಗ್ಸ್ ದಂಧೆ ಕಳೆದ ವರ್ಷಕ್ಕೆ ಹೋಲಿಸಿದರೆ ಈ ವರ್ಷ ಕಡಿಮೆಯಾಗಿದೆ. ಆದಾಗ್ಯೂ, ಮೆಡಿಕಲ್ ಸ್ಟೋರ್​​ಗಳಲ್ಲಿ ಕೂಡ ಸಿಂಥೆಟಿಕ್ ಡ್ರಗ್ಸ್ ಸಿಗುತ್ತಿದೆ ಎಂಬ ಮಾಹಿತಿ ಬಂದಿದ್ದು, ಇದು ನಮಗೆ ಆತಂಕ ಮೂಡಿಸಿದೆ ಎಂದು ಎಂದಿದ್ದಾರೆ.

ಇಂದು ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು, ಮೆಡಿಕಲ್ ಸ್ಟೋರ್​​ಗಳಲ್ಲಿ ಡ್ರಗ್ಸ್ ದಂಧೆಗೆ ಯಾವ ರೀತಿ ಕಡಿವಾಣ ಹಾಕಬೇಕು ಎಂಬ ಬಗ್ಗೆ ಇಂದು ಸಭೆ ನಡೆಸಿ ಚರ್ಚೆ ಮಾಡುತ್ತೇವೆ ಎಂದರು. ಮೆಡಿಕಲ್ ಸ್ಟೋರ್​​ಗಳಲ್ಲಿ ಸಿಂಥೆಟಿಕ್ ಡ್ರಗ್ಸ್, ನೋವು ನಿವಾರಕ ಮಾತ್ರೆಗಳನ್ನು ಹಲವು ಫಾರ್ಮಕ್ಯುಟಿಕಲ್ ಕಂಪೆನಿಯವರು ತಯಾರಿಸಿ ಮಾರಾಟ ಮಾಡುತ್ತಿರುವ ವಿಚಾರ ಆತಂಕ ತಂದಿದೆ.

ಅವುಗಳನ್ನು ಹೇಗೆ ನಿಯಂತ್ರಿಸಿ ಕಡಿವಾಣ ಹಾಕಬೇಕು ಎಂದು ಇಂದಿನ ಸಭೆಯಲ್ಲಿ ಚರ್ಚಿಸಲಾಗುವುದು. ಡ್ರಗ್ಸ್ ಮಾರಾಟಕ್ಕೆ ಕಾನೂನೇ ಬೇರೆ ಆಗುತ್ತದೆ. ಔಷಧ ಎಂದು ಹೇಳುತ್ತಾರೆ. ಅದಕ್ಕೆ ಆ ವಿಚಾರವಾಗಿ ಸಿಎಂ ಸಿದ್ದರಾಮಯ್ಯ ಜೊತೆ ಚರ್ಚೆ‌ ಮಾಡುತ್ತೇವೆ ಎಂದರು.

Leave a Reply

Your email address will not be published. Required fields are marked *

error: Content is protected !!