ದ.ಕ/ಉಡುಪಿ ಜಿಲ್ಲಾ ವಿ.ಪರಿಷತ್ ಕ್ಷೇತ್ರದ ಉಪಚುನಾಣೆಯ ದಿನಾಂಕ ಪ್ರಕಟ
ಬೆಂಗಳೂರು: ಕೋಟ ಶ್ರೀನಿವಾಸ ಪೂಜಾರಿ ರಾಜೀನಾಮೆಯಿಂದ ತೆರವಾಗಿರುವ ದಕ್ಷಿಣ ಕನ್ನಡ ಹಾಗೂ ಉಡುಪಿ ಉಭಯ ಜಿಲ್ಲೆಗಳ ಸ್ಥಳೀಯ ಸಂಸ್ಥೆಗಳ ವಿಧಾನಪರಿಷತ್ ಕ್ಷೇತ್ರದ ಉಪಚುನಾವಣೆಗೆ ಚುನಾವಣಾ ಆಯೋಗವು ದಿನಾಂಕ ಪ್ರಕಟಿಸಿದೆ.
ಸೆಪ್ಟೆಂಬರ್ 26ರಂದು ಚುನಾವಣಾ ಅಧಿಸೂಚನೆ ಜಾರಿಗೆ ಬರಲಿದ್ದು, ಅಕ್ಟೋಬರ್ 3 ನಾಮಪತ್ರ ಸಲ್ಲಿಕೆಗೆ ಕೊನೆಯ ದಿನವಾಗಿದೆ. ಅಕ್ಟೋಬರ್ 4ರಂದು ನಾಮಪತ್ರ ಪರಿಶೀಲನೆ ನಡೆಯಲಿದ್ದು, ಅಕ್ಟೋಬರ್ 7 ನಾಮಪತ್ರ ಹಿಂಪಡೆಯಲು ಕೊನೆಯ ದಿನವಾಗಿದೆ.
ಅಕ್ಟೋಬರ್ 21ರಂದು ಬೆಳಿಗ್ಗೆ 8ರಿಂದ ಸಂಜೆ 4 ಗಂಟೆವರೆಗೆ ಮತದಾನ ನಡೆಯಲಿದೆ. ಅಕ್ಟೋಬರ್ 24 ರಂದು ಮತ ಎಣಿಕೆ ನಡೆಯಲಿದ್ದು, ಫಲಿತಾಂಶ ಹೊರಬೀಳಲಿದೆ. ಇಂದಿನಿಂದಲೇ ಕ್ಷೇತ್ರ ವ್ಯಾಪ್ತಿಯಲ್ಲಿ ಮಾದರಿ ನೀತಿ ಸಂಹಿತೆ ಜಾರಿಗೆ ಬಂದಿದೆ.