ತಿರುಪತಿ ಲಡ್ಡು ತಯಾರಿಕೆಗೆ ಹಂದಿ, ದನದ ಕೊಬ್ಬು, ಮೀನಿನ ಎಣ್ಣೆ ಬಳಕೆ ದೃಢ

Oplus_131072

ತಿರುಪತಿ: ವಿಶ್ವವಿಖ್ಯಾತ ತಿರುಪತಿ ಲಡ್ಡು ತಯಾರಿಕೆಯಲ್ಲಿ ಗುಣಮಟ್ಟವಿಲ್ಲದ ಪದಾರ್ಥಗಳು ಮತ್ತು ಪ್ರಾಣಿಗಳ ಕೊಬ್ಬನ್ನು ಬಳಸಲಾಗುತ್ತಿದೆ ಎಂದು ಸ್ವತಃ ಆಂಧ್ರ ಪ್ರದೇಶ ಮುಖ್ಯಮಂತ್ರಿ ಆರೋಪಿಸಿದ ಬೆನ್ನಲ್ಲೇ, ತಿರುಪತಿ ಲಡ್ಡುವಿನಲ್ಲಿ ದನದ ಕೊಬ್ಬು, ಮೀನಿನ ಎಣ್ಣೆ ಬಳಸಿರುವುದು ಲ್ಯಾಬ್ ವರದಿಯಲ್ಲಿ ದೃಢಪಟ್ಟಿದೆ.

ತಿರುಪತಿ ಲಡ್ಡುವಿನಲ್ಲಿ ಹಂದಿ, ದನದ ಕೊಬ್ಬು, ಮೀನಿನ ಎಣ್ಣೆ ಬಳಸಿರುವುದನ್ನು ಗುಜರಾತ್ ಮೂಲದ ಜಾನುವಾರು ಪ್ರಯೋಗಾಲಯ, NDDB CALF Ltd ದೃಢಪಡಿಸಿದೆ ಎಂದು ಆಡಳಿತಾರೂಢ ತೆಲುಗು ದೇಶಂ ಪಕ್ಷ(ಟಿಡಿಪಿ) ಹೇಳಿದೆ.

ಇಂದು ಪತ್ರಿಕಾಗೋಷ್ಠಿಯಲ್ಲಿ ಪ್ರಯೋಗಾಲಯದ ವರದಿಯನ್ನು ಪ್ರದರ್ಶಿಸಿದ ಟಿಡಿಪಿ ವಕ್ತಾರ ಆನಂ ವೆಂಕಟ ರಮಣ ರೆಡ್ಡಿ ಅವರು, ತಿರುಪತಿಯ ಲಡ್ಡು ತಯಾರಿಕೆಗೆ ಬಳಸುವ ತುಪ್ಪದಲ್ಲಿ ಮೀನಿನ ಎಣ್ಣೆ, ಪ್ರಾಣಿಗಳ ಕೊಬ್ಬು ಇರುವುದು ಲ್ಯಾಬ್ ವರದಿಯಲ್ಲಿ ದೃಢಪಟ್ಟಿದೆ. ಇದರಲ್ಲಿ ಹಂದಿಯ ಕೊಬ್ಬು, ದನದ ಕೊಬ್ಬು,ಪಾಮಾಯಿಲ್‌,ಸೋಯಾಬಿನ್‌,ಸೂರ್ಯಕಾಂತಿ ಎಣ್ಣೆ, ಮೆಕ್ಕೆ ಜೋಳ ಎಣ್ಣೆ ಬೆರೆಸಿದ ಕಡಿಮೆ ಗುಣಮಟ್ಟದ ತುಪ್ಪ ಬಳಕೆ ಮಾಡಲಾಗುತ್ತಿದೆ ಎಂದು ಖಚಿತವಾಗಿದೆ ಎಂದರು.

ಪ್ರಯೋಗಾಲಯದ ವರದಿಯು ತುಪ್ಪದ ಮಾದರಿಯಲ್ಲಿ “ದನದ ಕೊಬ್ಬು” ಇರುವಿಕೆಯನ್ನು ದೃಢಪಡಿಸಿದೆ ಎಂದು ಹೇಳಿದ್ದಾರೆ.

ಹಿಂದಿನ ವೈಎಸ್‌ಆರ್‌ಸಿಪಿ ಸರ್ಕಾರದ ಅವಧಿಯಲ್ಲಿ ಪ್ರಸಿದ್ಧ ತಿರುಪತಿ ಲಡ್ಡು ತಯಾರಿಕೆಯಲ್ಲಿ ಗುಣಮಟ್ಟವಿಲ್ಲದ ಪದಾರ್ಥಗಳು ಮತ್ತು ಪ್ರಾಣಿಗಳ ಕೊಬ್ಬನ್ನು ಬಳಸಲಾಗಿದೆ ಎಂದು ಆಂಧ್ರಪ್ರದೇಶ ಮುಖ್ಯಮಂತ್ರಿ ಎನ್. ಚಂದ್ರಬಾಬು ನಾಯ್ಡು ಬುಧವಾರ ಆರೋಪಿಸಿದ್ದರು. ಇದಕ್ಕೆ ಭಾರೀ ವಿರೋಧ ವ್ಯಕ್ತವಾಗಿತ್ತು. ತಿರುಪತಿಯ ಭಕ್ತರ ನಂಬಿಕೆಗೆ ಚಂದ್ರಬಾಬು ನಾಯ್ಡು ಅವರ ಹೇಳಿಕೆ ಧಕ್ಕೆ ತಂದಿದೆ ಎಂದು ಟಿಟಿಡಿ ಅಧಿಕಾರಿಗಳು ವಾದಿಸಿದ್ದರು. ಆದರೆ, ಚಂದ್ರಬಾಬು ನಾಯ್ಡು ಅವರ ಆರೋಪ ಸತ್ಯ ಎಂಬುದು ಇದೀಗ ಬಂದಿರುವ ಲ್ಯಾಬ್ ವರದಿಯಲ್ಲಿ ದೃಢಪಟ್ಟಿದೆ.

Leave a Reply

Your email address will not be published. Required fields are marked *

error: Content is protected !!